ETV Bharat / state

ಈಟಿವಿ ಭಾರತ್ ಇಂಪ್ಯಾಕ್ಟ್.. ತಾಂಡಾ ಸಮಸ್ಯೆ ಬಗೆಹರಿಸುವುದಾಗಿ ಅಧಿಕಾರಿಗಳ ಭರವಸೆ - ETV Bhatat Impact news

ಸಿಸಿ ರಸ್ತೆ ಸೇರಿ ಇನ್ನಿತರ ಮೂಲಸೌಕರ್ಯ ಕಲ್ಪಿಸುವಂತೆ ಗ್ರಾಮಸ್ಥರ ಮನವಿ. ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಶಾಸಕರ ಹಾಗೂ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸುವುದಾಗಿ ಪಿಡಿಒ ಭರವಸೆ..

officials reacted on ETV Bharat report of koppal tanda problems
ಈಟಿವಿ ಭಾರತ್ ಇಂಪ್ಯಾಕ್ಟ್​: ತಾಂಡಾ ಸಮಸ್ಯೆ ಬಗೆಹರಿಸುವುದಾಗಿ ಅಧಿಕಾರಿಗಳ ಭರವಸೆ
author img

By

Published : Sep 30, 2020, 6:25 PM IST

ಕೊಪ್ಪಳ : ಈಟಿವಿ ಭಾರತ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು ಇಲ್ಲಿನ ಮುರುಡಿ ತಾಂಡಾದ ಹಲವು ಸಮಸ್ಯೆಗಳನ್ನ ಬಗೆಹರಿಸುವ ಭರವಸೆ ನೀಡಿದ್ದಾರೆ. ಜಿಲ್ಲೆಯ ಯಲಬುರ್ಗಾ ತಾಲೂಕಿನ ಮುರುಡಿ ತಾಂಡಾದಲ್ಲಿ ಮೂಲಸೌಕರ್ಯ ಕೊರತೆ ಕುರಿತಂತೆ ಈಟಿವಿ ಭಾರತ ನಿನ್ನೆ ‘ಈ ತಾಂಡಾದಲ್ಲಿ ಮೂಲಸೌಕರ್ಯಗಳ‌ ಸಮಸ್ಯೆಗಳ ತಾಂಡವ‘ ಎಂಬ ಶೀರ್ಷಿಕೆಯಡಿ ವಿಸ್ತೃತ ವರದಿ ಮಾಡಿತ್ತು. ವರದಿಯಿಂದ ಎಚ್ಚೆತ್ತ ಮುರುಡಿ ಗ್ರಾಮ ಪಂಚಾಯತ್‌ ಪಿಡಿಒ ಮಹಾಂತೇಶ್ ಬಾಳಿಕಾಯಿ, ಮುರುಡಿ ತಾಂಡಾಗೆ ಭೇಟಿ ನೀಡಿ ತಾಂಡಾದ ಜನರ ಸಮಸ್ಯೆ ಆಲಿಸಿದ್ದಾರೆ.

ಈಟಿವಿ ಭಾರತಕ್ಕೆ ಧನ್ಯವಾದ ಅರ್ಪಿಸಿದ ಸ್ಥಳೀಯರು

ಇದನ್ನೂ ಓದಿ: ಕೊಪ್ಪಳ: ಈ ತಾಂಡಾದಲ್ಲಿ ಮೂಲ ಸೌಕರ್ಯ ಸಮಸ್ಯೆಗಳ 'ತಾಂಡ'ವ

ತಾಂಡಾದ ಜನರು ಸಿಸಿ ರಸ್ತೆ ಸೇರಿ ಇನ್ನಿತರ ಮೂಲಸೌಕರ್ಯಗಳನ್ನು ಕಲ್ಪಿಸುವಂತೆ ಈ ಸಂದರ್ಭದಲ್ಲಿ ಮನವಿ ಮಾಡಿದ್ದಾರೆ. ಗ್ರಾಮಸ್ಥರ ಸಮಸ್ಯೆ ಆಲಿಸಿದ ಪಿಡಿಒ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಶಾಸಕರ ಹಾಗೂ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಾಂಡಾದ ಮಂಜುನಾಥ ಚೌಹಾಣ್ ತಿಳಿಸಿದ್ದಾರೆ. ಅಲ್ಲದೆ ತಾಂಡಾದ ಸಮಸ್ಯೆ ಕುರಿತು ವರದಿ ಪ್ರಕಟಿಸಿದ ಈಟಿವಿ ಭಾರತಕ್ಕೆ ಧನ್ಯವಾದ ಅರ್ಪಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.