ಕೊಪ್ಪಳ: ವಿದ್ಯುತ್ ಸ್ಪರ್ಶಿಸಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಜಿಲ್ಲೆಯ ಕುಷ್ಟಗಿ ತಾಲೂಕಿನ ಬಚನಾಳ ಗ್ರಾಮದಲ್ಲಿ ನಡೆದಿದೆ.
ಈಶಪ್ಪ ತಿಪ್ಪಣ್ಣ ದಾವಣಗೆರೆ (32) ಮೃತ ಯುವಕ. ಇಂದು ಬೆಳಗ್ಗೆ ತಮ್ಮ ಜಮೀನಿನಲ್ಲಿ ವಿದ್ಯುತ್ ಸಂಬಂಧಿತ ರಿಪೇರಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ದುರ್ಘಟನೆ ನಡೆದಿದೆ.
ಮೃತ ಯುವಕನ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದ್ದು, ಈ ಸಂಬಂಧ ತಾವರಗೇರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.