ಕೊಪ್ಪಳ: ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಇಂದು ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದು, ಮೃತರ ಸಂಖ್ಯೆ 5ಕ್ಕೆ ಏರಿದೆ.
ಕೊಪ್ಪಳದ ಭಾಗ್ಯನಗರ ಪಟ್ಟಣದ 42 ವರ್ಷದ ವ್ಯಕ್ತಿ ಇಂದು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಮೃತ ವ್ಯಕ್ತಿಗೆ ಸೋಂಕು ದೃಢವಾದ ಹಿನ್ನೆಲೆ ನಿನ್ನೆ ಮಧ್ಯಾಹ್ನ ಕೊಪ್ಪಳದ ಕೋವಿಡ್-19 ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇಂದು ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ನಿನ್ನೆ ಇಬ್ಬರು ಸೋಂಕಿತರು ಸಾವನ್ನಪ್ಪಿದ್ದರು. ಇಂದು ಮತ್ತೊಬ್ಬ ವ್ಯಕ್ತಿ ಸೋಂಕಿಗೆ ಬಲಿಯಾಗಿರೋದು ಜನರಲ್ಲಿ ಆತಂಕ ಹೆಚ್ಚಿಸಿದೆ.