ಕೊಪ್ಪಳ: ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಸೋಂಕಿನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿದ್ದು, ಇಂದು ಸಹ ಮತ್ತೊಬ್ಬ ಸೋಂಕಿತರು ಬಲಿಯಾಗಿದ್ದಾರೆ.
ಯಲಬುರ್ಗಾ ತಾಲೂಕಿನ ಗ್ರಾಮವೊಂದರ 65 ವರ್ಷದ ಪುರುಷ ಮೃತಪಟ್ಟಿದ್ದಾರೆ. ಕೊರೊನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆ ಸೋಂಕಿತನನ್ನು ಕೊಪ್ಪಳದ ನಿಗದಿತ ಕೋವಿಡ್ -19 ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಸೋಂಕಿತರ ಪ್ರಮಾಣ ಹೆಚ್ಚುತ್ತಿರುವ ಜೊತೆಗೆ ಸಾವಿನ ಸಂಖ್ಯೆ ಸಹ ಏರಿಕೆಯಾಗುತ್ತಿರುವುದು ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ.