ಗಂಗಾವತಿ: ಕನಕಗಿರಿ, ಕಾರಟಗಿ ಮತ್ತು ಗಂಗಾವತಿ ತಾಲೂಕಿನ ಎಲ್ಲಾ ಖಾಸಗಿ ಆಸ್ಪತ್ರೆಗಳು ಇಂದಿನಿಂದ ಮಾರ್ಚ್ 31ರವರೆಗೆ ಕಡ್ಡಾಯವಾಗಿ ಹೊರ ರೋಗಿಗಳ ಚಿಕಿತ್ಸೆ (ಒಪಿಡಿ) ಬಂದ್ ಮಾಡುವುದಾಗಿ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ (ಐಎಂಎ) ಪ್ರಕಟಣೆ ಹೊರಡಿಸಿದೆ.
ಕೊರೊನಾ ಭೀತಿ ಎಲ್ಲೆಡೆ ಆವರಿಸುತ್ತಿರುವ ಹಿನ್ನೆಲೆ ಜನರ ಆರೋಗ್ಯದ ದೃಷ್ಟಿಯಿಂದ ಸರ್ಕಾರದ ನಿರ್ಧಾರಕ್ಕೆ ಸಹಮತ ವ್ಯಕ್ತಪಡಿಸಲೇ ಬೇಕಿದೆ ಎಂದು ಅಧಿಕೃತ ಪ್ರಕಟಣೆ ನೀಡಿರುವ ಐಎಂಎ ತಾಲೂಕು ಘಟಕದ ಕಾರ್ಯದರ್ಶಿ ಬಸವರಾಜ್ ಸಿಂಗನಾಳ್ ತಿಳಿಸಿದ್ದಾರೆ.
ಖಾಸಗಿ ಆಸ್ಪತ್ರೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಬರುತ್ತಿದ್ದು, ಅಕ್ಕ-ಪಕ್ಕದಲ್ಲಿ ಆಸೀನರಾಗುವುದು ಸಾಮಾನ್ಯವಾಗಿತ್ತು. ಖಾಸಗಿ ಆಸ್ಪತ್ರೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಬರುತ್ತಿದ್ದ ಹಿನ್ನೆಲೆ ಈ ಕ್ರಮಕ್ಕೆ ತೆಗೆದುಕೊಳ್ಳಲಾಗಿದೆ. ಆದರೆ, ತುರ್ತು ಚಿಕಿತ್ಸೆಗಳು ಎಂದಿನಂತೆ ನಡೆಯುತ್ತವೆ ಎಂದು ಬಸವರಾಜ ಸ್ಪಷ್ಟಪಡಿಸಿದ್ದಾರೆ.