ಕುಷ್ಟಗಿ (ಕೊಪ್ಪಳ): ತ್ರಿವಳಿ ಜಿಲ್ಲೆಗಳನ್ನು (ಗದಗ,ಕೊಪ್ಪಳ,ರಾಯಚೂರು) ಸಂಪರ್ಕಿಸುವ ಚಿಕ್ಕಹೆಸರೂರು-ಮುಂಡರಗಿ ರಾಜ್ಯ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ಈ ವೇಳೆ ಸ್ಥಳೀಯರು ಕಾಮಗಾರಿಗೆ ಅಡ್ಡಿಪಡಿಸಿರುವ ಘಟನೆ ಕುಷ್ಟಗಿ ತಾಲೂಕಿನ ಮುದೇನೂರು ಗ್ರಾಮದಲ್ಲಿ ನಡೆಯಿತು.
ಮುದೇನೂರು ಗ್ರಾಮದ ವ್ಯಾಪ್ತಿಯಲ್ಲಿರುವ ರಸ್ತೆಯನ್ನು ಅಗಲೀಕರಿಸದೆ ಕಾಮಗಾರಿ ಕೈಗೊಂಡಿದ್ದಾರೆ. ಜೊತೆಗೆ ಸೂಕ್ತ ಪ್ರಮಾಣದಲ್ಲಿ ರಸ್ತೆಗೆ ಜಲ್ಲಿಕಲ್ಲು, ಡಾಂಬರ್ ಬಳಸದೆ ಕಳಪೆ ಕಾಮಗಾರಿ ಮಾಡಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದರು.
ಈ ವೇಳೆ ಲೋಕೋಪಯೋಗಿ ಇಲಾಖೆ ಅಧಿಕಾರಿ ಜೆ. ಈ. ಭೀಮಸೇನ ರಾವ್ ವಜ್ರಬಂಡಿ ಅವರು ಆಗಿರುವ ವ್ಯತ್ಯಾಸವನ್ನು ಸರಿಪಡಿಸಿ ಗುಣಮಟ್ಟದ ರಸ್ತೆ ನಿರ್ಮಿಸಲು ಗುತ್ತಿಗೆದಾರರಿಗೆ ಸೂಚಿಸುವುದಾಗಿ ಭರವಸೆ ನೀಡಿದರು.