ಗಂಗಾವತಿ: ಮಕ್ಕಳ ಹಬ್ಬ ಕೇವಲ ಕಾಟಾಚಾರದ ಆಚರಣೆಗೆ ಸೀಮಿತವಾಗಬಾರದು. ಮಕ್ಕಳಲ್ಲಿ ಹುದುಗಿರುವ ಕಲೆ, ಸಾಹಿತ್ಯವನ್ನು ಹೊರ ತರುವ ವೇದಿಕೆಯಾಗಬೇಕು ಎಂದು ಶಾಸಕ ಪರಣ್ಣ ಮುನವಳ್ಳಿ ಶಿಕ್ಷಕ ಸಮುದಾಯಕ್ಕೆ ಕಿವಿಮಾತು ಹೇಳಿದ್ರು.
ತಾಲ್ಲೂಕಿನ ಬಸವಪಟ್ಟಣ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕ್ಲಸ್ಟರ್ ಮಟ್ಟದ ಮಕ್ಕಳ ಹಬ್ಬ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಯ ಶಿಕ್ಷಣ ಗುಣಮಟ್ಟ ಕುಸಿಯುತ್ತಿದೆ ಎಂಬ ಅನುಮಾನ ಸಾರ್ವಜನಿಕರಲ್ಲಿದೆ. ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಸರ್ಕಾರ ನೂರಾರು ಕೋಟಿ ರೂ ವೆಚ್ಚ ಮಾಡುತ್ತಿದೆ. ಈ ಬಗ್ಗೆ ಗಮನ ಹರಿಸಿ ಶಿಕ್ಷಕರು ಮಕ್ಕಳನ್ನು ಪಠ್ಯೇತರ ಚಟುವಟಿಕೆಯ ಜೊತೆಯಲ್ಲಿ ಪಠ್ಯದಲ್ಲೂ ಗುಣಮಟ್ಟ ಕಾಯ್ದುಕೊಳ್ಳಲು ಮುಂದಾಗಬೇಕು ಎಂದು ಸಲಹೆ ನೀಡಿದರು.