ಕೊಪ್ಪಳ: ಕೊರೊನಾ ಭೀತಿಯ ನಡುವೆ ಇಂದಿನಿಂದ ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆ ಶುರುವಾಗುತ್ತಿವೆ. ಕೊಪ್ಪಳ ಜಿಲ್ಲೆಯಲ್ಲಿಯೂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಆದರೆ, ಕೊರೊನಾ ಭೀತಿ ಹಿನ್ನೆಲೆಯಲ್ಲಿ ಜಿಲ್ಲೆಯ ಗ್ರಾಮೀಣ ಭಾಗದಲ್ಲಿನ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬಸ್ ಮೂಲಕ ತೆರಳಲು ಹಿಂದೇಟು ಹಾಕುತ್ತಿದ್ದಾರೆ.
ಸರಿಯಾದ ಸಮಯಕ್ಕೆ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಗ್ರಾಮೀಣ ಭಾಗದಲ್ಲಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಆದರೆ, ಬಸ್ ಮೂಲಕ ತೆರಳಲು ವಿದ್ಯಾರ್ಥಿಗಳು ಬರುತ್ತಿಲ್ಲ. ಪಾಲಕರು ಸಹ ಮಕ್ಕಳನ್ನು ಬಸ್ ಮೂಲಕ ಪರೀಕ್ಷಾ ಕೇಂದ್ರಕ್ಕೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ. ಅಲ್ಲದೇ ತಮ್ಮ ದ್ವಿಚಕ್ರ ವಾಹನಗಳ ಮೂಲಕ ಪರೀಕ್ಷಾ ಕೇಂದ್ರಕ್ಕೆ ಕರೆದುಕೊಂಡು ಹೋಗುತ್ತಿದ್ದಾರೆ. ಹೀಗಾಗಿ ನಿಗದಿತ ಸಮಯಕ್ಕೆ ತೆರಳದೆ ಬಸ್ ಗಳು ಖಾಲಿ ಖಾಲಿಯಾಗಿ ನಿಂತು ಕೊಂಡಿವೆ.