ಕೊಪ್ಪಳ: ಕೊರೊನಾ ಭೀತಿ ನಡುವೆಯೂ ಜಿಲ್ಲೆಯಲ್ಲಿ ಈಗಾಗಲೇ ಸಾರಿಗೆ ಬಸ್ಗಳ ಸಂಚಾರ ಆರಂಭವಾಗಿದ್ದು, ಇದರಲ್ಲಿ ಪ್ರಯಾಣಿಸುವ ಎಲ್ಲರ ಮಾಹಿತಿಯನ್ನು ತೆಗೆದುಕೊಳ್ಳಲಾಗುತ್ತಿದೆ.
ಮೂರನೇ ಹಂತದ ಲಾಕ್ಡೌನ್ ಘೋಷಣೆಯಾದ ಬಳಿಕ ಜಿಲ್ಲೆಯಲ್ಲಿ ನಿರ್ದಿಷ್ಟ ಪ್ರದೇಶಗಳಿಗೆ ಮಾತ್ರ ಸಾರಿಗೆ ಸೇವೆ ಪ್ರಾರಂಭಿಸಲಾಗಿತ್ತು. ಕೊಪ್ಪಳ, ಗಂಗಾವತಿ, ಯಲಬುರ್ಗಾ, ಕುಕನೂರು, ಕನಕಗಿರಿ ಸೇರಿ ನಿರ್ದಿಷ್ಟ ಸ್ಥಳಗಳಿಗೆ ಬಸ್ಗಳು ಓಡಾಡುತ್ತಿವೆ. ಜಿಲ್ಲೆಯ ಬಸ್ ನಿಲ್ದಾಣದ ಮೂಲಕ ಪ್ರಯಾಣಿಸುವ ಪ್ರಯಾಣಿಕರ ಎಲ್ಲ ಮಾಹಿತಿ ತೆಗೆದುಕೊಂಡು ಸಂಚಾರಕ್ಕೆ ಅವಕಾಶ ನೀಡಲಾಗುತ್ತಿದೆ.
ಬಸ್ ನಿಲ್ದಾಣ ಖಾಲಿ ಖಾಲಿ
ಸ್ಕ್ರೀನಿಂಗ್ ಮಾಡುವುದರ ಜೊತೆಗೆ ಪ್ರಯಾಣಿಕರ ಹೆಸರು, ಊರು, ಪ್ರಯಾಣದ ಸ್ಥಳ, ಮೊಬೈಲ್ ಸಂಖ್ಯೆ, ವಯಸ್ಸು ಹೀಗೆ ಪ್ರಯಾಣಿಕರ ಪ್ರತಿಯೊಂದು ಡಿಟೈಲ್ಸ್ ತೆಗೆದುಕೊಳ್ಳಲಾಗುತ್ತಿದೆ. ಆದ್ರೆ ಬಸ್ ಸಂಚಾರ ಆರಂಭವಾಗಿದ್ದರೂ ಪ್ರಯಾಣಿಕರ ಸಂಖ್ಯೆ ಸಾಕಷ್ಟು ಕಡಿಮೆ ಇದೆ. ಸುಮಾರು ಎರಡು ಗಂಟೆಗೆ ಒಂದು ಬಸ್ ಓಡಾಡುತ್ತದೆ. ಈಗಾಗಲೇ ನಿಗದಿಪಡಿಸಲಾಗಿರುವ ಒಂದು ಬಸ್ನಲ್ಲಿ 23 ರಿಂದ 25 ಪ್ರಯಾಣಿಕರನ್ನು ಮಾತ್ರ ಹೊತ್ತು ಸಾಗುತ್ತಿವೆ. ಅಲ್ಲದೇ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಇಲ್ಲದೇ ಇರುವುದರಿಂದ ನಿಲ್ದಾಣ ಖಾಲಿ ಖಾಲಿಯಾಗಿ ಕಾಣುತ್ತಿದೆ.