ಕೊಪ್ಪಳ : ಮಹಿಳೆಯರ ಮೇಲೆ ದೌರ್ಜನ್ಯ ಹೆಚ್ಚುತ್ತಿರುವ ಹಿನ್ನೆಲೆ ವಿದ್ಯಾರ್ಥಿನಿಯರಲ್ಲಿ ಆತ್ಮಸ್ಥೈರ್ಯ ತುಂಬಲು ವಿಶೇಷ ತರಬೇತಿ ನೀಡಲಾಗುತ್ತದೆ ಎಂದು ಕೆಎಸ್ಆರ್ಪಿ ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು.
ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ಭಾರತೀಯ ಮೀಸಲು ಪೊಲೀಸ್ ಪಡೆ ಹಾಗೂ ಕೆಎಸ್ಆರ್ಪಿ ಬೆಟಾಲಿಯನ್ನಲ್ಲಿ ನಡೆದ ಕೆಎಸ್ಆರ್ಪಿಯ 23ನೇ ತಂಡದ ನಿರ್ಗಮನ ಪಥ ಸಂಚಲನ ಕಾರ್ಯಕ್ರಮದಲ್ಲಿ ಮಾತನಾಡಿದರು. ರಾಜ್ಯದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆ, ವಿದ್ಯಾರ್ಥಿನಿಯರಲ್ಲಿ ಆತ್ಮಸ್ಥೈರ್ಯ ತುಂಬಲು ವಿಶೇಷ ತರಬೇತಿ ನೀಡಲಾಗುತ್ತದೆ ಎಂದರು.
ಇದನ್ನೂ ಓದಿ: ಮೈಸೂರು ಲ್ಯಾಂಪ್ಸ್ ಜಾಗ ಟ್ರಸ್ಟ್ಗೆ ನೋಂದಣಿ: ಅರ್ಧ ಗಂಟೆ ಚರ್ಚೆಗೆ ರೂಲಿಂಗ್ ನೀಡಿದ ಸಭಾಪತಿ ಹೊರಟ್ಟಿ
ಕಲ್ಯಾಣ ಕರ್ನಾಟಕ ಭಾಗದ ಆಯ್ದ ಶಾಲಾ ಕಾಲೇಜುಗಳಲ್ಲಿ ತರಬೇತಿ ನೀಡಲಾಗುತ್ತದೆ. ರಾಜ್ಯದಲ್ಲಿ ಸುಮಾರು 300 ಪ್ರೌಢಶಾಲೆಯಲ್ಲಿ ಎನ್ಸಿಸಿ ಮಾದರಿಯಲ್ಲಿ ಪೊಲೀಸ್ ತರಬೇತಿ ನೀಡಲಾಗುತ್ತದೆ ಎಂದರು. ಪೊಲೀಸ್ ತರಬೇತಿ ಪಡೆದವರು ಮುಂದಿನ ದಿನಗಳಲ್ಲಿ ತಮ್ಮ ಕರ್ತವ್ಯಕ್ಕೆ ಚ್ಯುತಿ ಬಾರದಂತೆ ಕೆಲಸ ಮಾಡಬೇಕೆಂದರು.
151 ಜನ ಕೆಎಸ್ಆರ್ಪಿ ಪಡೆಗೆ ತರಬೇತಿ ಪಡೆದಿದ್ದಾರೆ. ಇಂದು ಅಚ್ಚುಕಟ್ಟಾಗಿ ನಿರ್ಗಮನ ಪಥ ಸಂಚಲನ ನಡೆಯಿತು.