ಕೊಪ್ಪಳ: ಇಂದು ಕೂಡ ನಗರದ ಜೆ.ಪಿ. ಮಾರುಕಟ್ಟೆ ಹಾಗೂ ಎಪಿಎಂಸಿ ಮಾರುಕಟ್ಟೆಯಲ್ಲಿ ಕೋವಿಡ್ ನಿಯಮ ಗಾಳಿಗೆ ತೂರಿರುವ ಜನರು ಅಗತ್ಯ ವಸ್ತುಗಳ ಖರೀದಿಯಲ್ಲಿ ತೊಡಗಿದ್ದರು.
ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಎಷ್ಟೇ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತಂದರೂ ಉಲ್ಲಂಘಿಸುವವರ ಸಂಖ್ಯೆ ಮಾತ್ರ ಕಡಿಮೆಯಾಗುತ್ತಿಲ್ಲ. ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳ ಖರೀದಿಗಾಗಿ ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ಈ ಸಮಯದಲ್ಲಿ ಜನರು ಮಾರುಕಟ್ಟೆಗಳಲ್ಲಿ ಮಾಸ್ಕ್ ಹಾಕದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಅಗತ್ಯ ವಸ್ತುಗಳ ಖರೀದಿಗೆ ಮುಗಿಬೀಳುತ್ತಿದ್ದಾರೆ.
10 ಗಂಟೆಯಾಗುತ್ತಿದ್ದಂತೆ ಪೊಲೀಸರು ಅಂಗಡಿಗಳನ್ನು ಬಂದ್ ಮಾಡಿಸಿದರು.
ಇದನ್ನೂ ಓದಿ: ರಾಮನಗರ ನಗರಸಭೆ ಚುನಾವಣೆ: ಭಾರೀ ಮತಗಳಿಂದ ಗೆದ್ದ ಕೋವಿಡ್ಗೆ ಬಲಿಯಾದ ಅಭ್ಯರ್ಥಿ!