ಕೊಪ್ಪಳ : ಪಟ್ಟಣ ಪಂಚಾಯತ್ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಮತ ಕೇಳಲು ಹೋದ ಶಾಸಕ ಕೆ ರಾಘವೇಂದ್ರ ಹಿಟ್ನಾಳ್ ಅವರನ್ನು ಮತದಾರರು ತರಾಟೆಗೆ ತೆಗೆದುಕೊಂಡ ಘಟನೆ ನಗರದ ಭಾಗ್ಯನಗರದಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪಟ್ಟಣ ಪಂಚಾಯತ್ ಚುನಾವಣೆ ಹಿನ್ನೆಲೆ ತಮ್ಮ ಅಭ್ಯರ್ಥಿಯ ಪರ ಮತಯಾಚನೆಗಾಗಿ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು ಭಾಗ್ಯನಗರದ ನವನಗರದಲ್ಲಿ ನಿನ್ನೆ ರಾತ್ರಿ ತೆರಳಿದ್ದರು.
ಈವರೆಗೂ ಇತ್ತ ಕಣ್ಣು ಹಾಯಿಸದ ನೀವು, ಈಗ ಚುನಾವಣೆ ಇದೆ ಎಂದು ಬಂದಿದ್ದೀರಿ ಎಂದು ತರಾಟೆಗೆ ತೆಗೆದುಕೊಂಡರು. ಆಗ ಅವರನ್ನು ಸಮಾಧಾನಪಡಿಸಿದ ಶಾಸಕರು, ಈಗ ಭರವಸೆ ನೀಡಲು ಬರುವುದಿಲ್ಲ. ಚುನಾವಣೆ ಮುಗಿದ ಬಳಿಕ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.