ಕೊಪ್ಪಳ: 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಹಾಕುವುದಕ್ಕೆ ನಿನ್ನೆಯಿಂದ ಚಾಲನೆ ದೊರಕಿದ್ದು, ಲಸಿಕೆ ಪಡೆಯಲು ಜನರು ಸಾಲುಗಟ್ಟಿದ್ದಾರೆ.
ನಗರದ ಜಿಲ್ಲಾಸ್ಪತ್ರೆಯಲ್ಲಿ ಲಸಿಕೆ ನೀಡಲಾಗುತ್ತಿದ್ದು, ಪೋರ್ಟಲ್ ನಲ್ಲಿ ನೋಂದಣಿ ಮಾಡಿಸಿಕೊಂಡ ಹಾಗೂ ಅಲ್ಲಿಯೇ ನೊಂದಣಿ ಮಾಡಿಸಿಕೊಂಡು ವ್ಯಾಕ್ಸಿನ್ ಹಾಕಿಸಿಕೊಳ್ಳಲು ಬರುತ್ತಿದ್ದಾರೆ.
ಜಿಲ್ಲಾಸ್ಪತ್ರೆಯ ಎರಡನೇ ಮಹಡಿಯಲ್ಲಿ ಲಸಿಕಾ ಕೇಂದ್ರ ತೆರೆಯಲಾಗಿದ್ದು, ವ್ಯಾಕ್ಸಿನ್ ಹಾಕಿಸಿಕೊಳ್ಳಲು 18 ವರ್ಷ ಮೇಲ್ಪಟ್ಟವರು ಬಂದು ಕ್ಯೂ ನಿಂತಿದ್ದಾರೆ. ಈವರೆಗೂ ಈಗಾಲೇ ಸುಮಾರು 200 ಕ್ಕೂ ಅಧಿಕ ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ. ವ್ಯಾಕ್ಸಿನ್ ಪಡೆಯಲು ಜನರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವುದು ಕಂಡು ಬರುತ್ತಿದೆ.