ETV Bharat / state

ಉಸಿರಾಟ ತೊಂದರೆಯಿಂದ ವ್ಯಕ್ತಿ ಸಾವು.. ಕೊರೊನಾ ಶಿಷ್ಠಾಚಾರದಂತೆ ಅಂತ್ಯಕ್ರಿಯೆ..

ಆಯಾಸ ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಬೇಕು ಎಂಬ ಸರ್ಕಾರದ ಆದೇಶದ ಹಿನ್ನೆಲೆ ಇಲ್ಲಿನ ವೈದ್ಯರು ಕೊಪ್ಪಳಕ್ಕೆ ಶಿಫಾರಸು ಮಾಡಿದ್ದಾರೆ. ಆದರೆ, ರೋಗಿ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಶವಸಂಸ್ಕಾರ
ಶವಸಂಸ್ಕಾರ
author img

By

Published : Apr 30, 2020, 10:56 AM IST

ಗಂಗಾವತಿ : ಕನಕಗಿರಿ ತಾಲೂಕಿನ ನವಲಿ ಹೋಬಳಿಯ ಆದಾಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಉಸಿರಾಟದ ತೊಂದರೆಯಿಂದ ಸಾವನ್ನಪ್ಪಿದ್ದರು. ಸರ್ಕಾರದ ನಿರ್ದೇಶನದ ಮೇರೆಗೆ ಕೊರೊನಾ ಸೋಂಕಿತ ವ್ಯಕ್ತಿಯಂತೆ ಆತನನ್ನ ಪರಿಗಣಿಸಿ ಅಂತ್ಯ ಸಂಸ್ಕಾರ ನಡೆಸಲಾಗಿದೆ.

ಗ್ರಾಮದ ಮಲ್ಲನಗೌಡ ಈರನಗೌಡ (56) ಮೃತ ದುರ್ದೈವಿ. ಈತ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ. ಆದರೆ, ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ. ಆಯಾಸ ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಬೇಕು ಎಂಬ ಸರ್ಕಾರದ ಆದೇಶದ ಹಿನ್ನೆಲೆ ಇಲ್ಲಿನ ವೈದ್ಯರು ಕೊಪ್ಪಳಕ್ಕೆ ಶಿಫಾರಸು ಮಾಡಿದ್ದಾರೆ. ಆದರೆ, ರೋಗಿ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಆರೋಗ್ಯ ಇಲಾಖೆಯ ಸಿಬ್ಬಂದಿ ಮೃತ ವ್ಯಕ್ತಿಯ ಗಂಟಲು ದ್ರವ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಕುಟುಂಬದ ಆಯ್ದ ವ್ಯಕ್ತಿಗಳಿಗೆ ಮಾತ್ರ ಶವ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗಿತ್ತು. ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಪೊಲೀಸರು ಮುಂದೆ ನಿಂತು ಕೊರೊನಾ ಪಾಸಿಟಿವ್‌ನಿಂದ ಮೃತರಾದವರಿಗೆ ಪಾಲಿಸುವ ಶಿಷ್ಠಾಚಾರದಂತೆಯೇ ಈತನ ಶವ ಸಂಸ್ಕಾರವನ್ನೂ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.