ಕುಷ್ಟಗಿ(ಕೊಪ್ಪಳ): ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ನೇಣಿಗೆ ಶರಣಾಗಿದ್ದಾನೆ. ಕುಷ್ಟಗಿ ನಿವಾಸಿ ತಿಪ್ಪಣ್ಣ ಮಲ್ಲಿಕಾರ್ಜುನ ತಲೆಖಾನ(57) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕೌಟುಂಬಿಕ ಕಲಹಕ್ಕೆ ಬೇಸತ್ತು ಮನನೊಂದು ಟಕ್ಕಳಕಿಯ ಸಮೀಪ ಬೇವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕೌಟುಂಬಿಕ ಕಲಹದಿಂದ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.