ETV Bharat / state

ಕೊಪ್ಪಳದಲ್ಲಿ ಪೊಲೀಸ್ ಹುತಾತ್ಮ ಸ್ಮಾರಕಕ್ಕೆ ಡಿಸಿ,ಎಸ್ಪಿ ಪುಷ್ಪ ನಮನ - ಪೊಲೀಸ್ ಹುತಾತ್ಮ ಸ್ಮಾರಕಕ್ಕೆ ಪುಷ್ಪ ನಮನ

ಕೊಪ್ಪಳ ನಗರದಲ್ಲಿ ಪೊಲೀಸ್ ಹುತಾತ್ಮ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿ, ಮೂರು ಸುತ್ತು ಗುಂಡು ಹಾರಿಸುವ ಮೂಲಕ ಗೌರವ ಸಲ್ಲಿಸಲಾಯಿತು.

police
ಪೊಲೀಸ್ ಹುತಾತ್ಮ ದಿನಾಚರಣೆ
author img

By

Published : Oct 21, 2020, 11:47 AM IST

Updated : Oct 21, 2020, 12:32 PM IST

ಕೊಪ್ಪಳ: ಕರ್ತವ್ಯದಲ್ಲಿದ್ದಾಗ ಹುತಾತ್ಮರಾದ ಪೊಲೀಸರಿಗೆ ನಗರದ ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ ಗೌರವ ಸಲ್ಲಿಸಲಾಯಿತು.

ಪೊಲೀಸ್ ಹುತಾತ್ಮ ದಿನಾಚರಣೆ

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಾಳ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ. ಶ್ರೀಧರ ಸೇರಿದಂತೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ಗಣ್ಯರು ಪೊಲೀಸ್ ಹುತಾತ್ಮ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು. ಇದೇ ವೇಳೆ ಮೂರು ಸುತ್ತು ಗುಂಡು ಹಾರಿಸುವ ಮೂಲಕ ವಿಶೇಷ ಗೌರವ ಸಲ್ಲಿಸಲಾಯಿತು. ಅಲ್ಲದೆ ಎರಡು ನಿಮಿಷ ಕಾಲ ಮೌನಾಚರಣೆ ನಡೆಯಿತು.

ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ದೇಶದ ಒಳಗೆ ಮತ್ತು ಹೊರಗೆ ಆಪತ್ತು ಎದುರಾದಾಗ ಸೈನ್ಯ ಹಾಗೂ ಪೊಲೀಸರು ತಮ್ಮ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಾರೆ. ಹುತಾತ್ಮರ ಕುಟುಂಬಕ್ಕೆ ಧೈರ್ಯ, ಸ್ಥೈರ್ಯ ತುಂಬಬೇಕಾಗಿರೋದು ಪ್ರತಿಯೊಬ್ಬರ ಕರ್ತವ್ಯ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ. ಶ್ರೀಧರ್ ಅವರು ಪೊಲೀಸ್ ಹುತಾತ್ಮ ದಿನಾಚರಣೆ ಹಿನ್ನೆಲೆ ಹಾಗೂ ಕಳೆದ ವರ್ಷ ಕರ್ತವ್ಯದಲ್ಲಿದ್ದಾಗ ಹುತಾತ್ಮರಾದ ಪೊಲೀಸರ ಹೆಸರು ವಾಚಿಸಿ ಗೌರವ ಸಲ್ಲಿಸಿದರು.

Last Updated : Oct 21, 2020, 12:32 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.