ಕೊಪ್ಪಳ: ನಾಗರಿಕ ಪೊಲೀಸ್ ಕಾನ್ಸ್ಸ್ಟೇಬಲ್ ಹುದ್ದೆಗೆ ಇಂದು ಲಿಖಿತ ಪರೀಕ್ಷೆ ನಡೆಯುತ್ತಿದ್ದು ಬೆಳಗ್ಗೆ 11 ಗಂಟೆಗೆ ಪರೀಕ್ಷೆ ಆರಂಭವಾಗಲಿದೆ.
ನಗರದ ಒಟ್ಟು 13 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಬರುವ ಅಭ್ಯರ್ಥಿಗಳಿಗೆ ಆಯಾ ಪರೀಕ್ಷಾ ಕೇಂದ್ರಗಳಲ್ಲಿ ಕೋವಿಡ್ -19 ಮಾರ್ಗಸೂಚಿಗಳನ್ವಯ ಥರ್ಮಲ್ ಸ್ಕ್ರೀನಿಂಗ್, ಕಡ್ಡಾಯ ಮಾಸ್ಕ್ ಧರಿಸಿ ಪರೀಕ್ಷೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ಬರುವ ಅಭ್ಯರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತಿದೆ.
ಇಂದು ನಡೆಯುತ್ತಿರುವ ಪರೀಕ್ಷೆಗೆ ಪ್ರವೇಶ ಪತ್ರಗಳನ್ನು ಪಡೆದುಕೊಳ್ಳಲು ಅಭ್ಯರ್ಥಿಗಳು ಪರದಾಡಿದರು. ತಾಂತ್ರಿಕ ದೋಷದಿಂದಾಗಿ ಪ್ರವೇಶ ಪತ್ರಗಳು ಡೌನ್ಲೋಡ್ ಆಗದೆ ಅಭ್ಯರ್ಥಿಗಳು ಪರದಾಡಿದರು. ನಿನ್ನೆ ಸಂಜೆ 4 ಗಂಟೆಯಿಂದಲೇ ಸರ್ವರ್ ಸಮಸ್ಯೆ ಉಂಟಾಗಿದ್ದು, ಬೆಳಗ್ಗೆಯಿಂದಲೂ ಅಭ್ಯರ್ಥಿಗಳು ನಗರದ ಇಂಟರ್ನೆಟ್ ಸೆಂಟರ್ಗಳ ಮುಂದೆ ಮುಗಿಬಿದ್ದಿದ್ದ ದೃಶ್ಯ ಕಂಡುಬಂತು.