ಗಂಗಾವತಿ (ಕೊಪ್ಪಳ): ನವೆಂಬರ್ 2ರಂದು ಗಂಗಾವತಿ ನಗರಸಭೆಗೆ ನಡೆಯುತ್ತಿರುವ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ಮಧ್ಯೆ ಭಾರಿ ಪ್ರಮಾಣದ ಗಲಭೆಯಾಗುವ ಸಾಧ್ಯತೆಗಳಿವೆ ಎಂಬ ಮಾಹಿತಿಯನ್ನು ಪೊಲೀಸ್ ಇಲಾಖೆ ಕಲೆ ಹಾಕಿದೆ.
ಪೊಲೀಸ್ ಇಲಾಖೆಯ ಆಂತರಿಕ ಭದ್ರತಾ (ಇಂಟಲಿಜೆನ್ಸ್) ವಿಭಾಗದ ಸಿಬ್ಬಂದಿ ಈಗಾಗಲೇ ಈ ಮಾಹಿತಿಯನ್ನು ಕಲೆ ಹಾಕಿದ್ದಾರೆ. ಜೊತೆಗೆ ಭದ್ರತೆಗಾಗಿ 300ಕ್ಕೂ ಹೆಚ್ಚು ಸಿಬ್ಬಂದಿ ನೀಡುವಂತೆ ಶಹರ ಪೊಲೀಸರು ಜಿಲ್ಲಾ ಎಸ್ಪಿ ಪತ್ರ ಬರೆದಿದ್ದಾರೆ. ನಗರಸಭೆಯ ಅಧ್ಯಕ್ಷ ಸ್ಥಾನಕ್ಕಾಗಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ನಡುವೆ ನಡೆಯುತ್ತಿರುವ ಗುದ್ದಾಟ ಈಗಾಗಲೇ ಸಾಕಷ್ಟು ಸದ್ದು ಮಾಡಿದೆ.
ಈ ಹಿನ್ನೆಲೆ ಎಲ್ಲಾ ಮಾಹಿತಿ ಕಲೆ ಹಾಕಿರುವ ಆಂತರಿಕ ಭದ್ರತಾ ಸಿಬ್ಬಂದಿ ಮಾಹಿತಿ ಆಧರಿಸಿರುವ ಶಹರ ಪೊಲೀಸರು, ಗಲಭೆಯಾಗುವ ಸಾಧ್ಯತೆಯ ಬಗ್ಗೆ ಮೇಧಿಕಾರಿಗಳಿಗೆ ವರದಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.