ETV Bharat / state

SSLC ಪರೀಕ್ಷೆಗೆ ಸಿದ್ಧತೆ: ಕೊಪ್ಪಳದ 108 ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ 23,853 ವಿದ್ಯಾರ್ಥಿಗಳು

ಕೊಪ್ಪಳದಲ್ಲಿ SSLC ಪರೀಕ್ಷೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲೆಯ 108 ಪರೀಕ್ಷಾ ಕೇಂದ್ರಗಳಲ್ಲಿ 23,853 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.‌

Preparation for SSLC exam
ಎಸ್ಎಸ್ಎಲ್​​ಸಿ ಪರೀಕ್ಷೆಗೆ ಸಿದ್ದತೆ
author img

By

Published : Jul 18, 2021, 10:58 AM IST

ಕೊಪ್ಪಳ: ಕೊರೊನಾ ಸೋಂಕಿನ ಭೀತಿ ನಡುವೆಯೂ ನಾಳೆ ಹಾಗೂ ಗುರುವಾರ ಎರಡು ದಿನಗಳ SSLC ಪರೀಕ್ಷೆಗಳು ನಡೆಯಲಿವೆ‌. ಕೊಪ್ಪಳದಲ್ಲಿಯೂ ಪರೀಕ್ಷೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಜಿಲ್ಲೆಯ 108 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ‌.

ಎಸ್ಎಸ್ಎಲ್​​ಸಿ ಪರೀಕ್ಷೆಗೆ ಸಿದ್ಧತೆ

ಕೊರೊನಾ ಭೀತಿ ನಡುವೆ ವಿದ್ಯಾರ್ಥಿ ಜೀವನದ ಅತ್ಯಂತ ಮಹತ್ವದ ಘಟ್ಟವಾಗಿರುವ ಎಸ್ಎಸ್​ಎಲ್​​ಸಿ ಪರೀಕ್ಷೆಯನ್ನು ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರ ಹೊಸ ಮಾದರಿಯಲ್ಲಿ ನಡೆಸುತ್ತಿದೆ. ನಾಳೆ ಹಾಗೂ ಗುರುವಾರ ಪರೀಕ್ಷೆ ನಡೆಯುತ್ತಿದ್ದು, ಕೊಪ್ಪಳ ಜಿಲ್ಲೆಯಲ್ಲಿಯೂ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲೆಯ ಒಟ್ಟು 108 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 23,853 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.‌ ಇದರಲ್ಲಿ 20,696 ಹೊಸ ವಿದ್ಯಾರ್ಥಿಗಳು, 341 ವಲಸೆ ವಿದ್ಯಾರ್ಥಿಗಳು, 2058 ಮರು ಪರೀಕ್ಷೆ ಬರೆಯುವವರು ಹಾಗು 814 ಅಭ್ಯರ್ಥಿಗಳು ಖಾಸಗಿಯಾಗಿ ಪರೀಕ್ಷೆ ಬರೆಯಲು ಸಿದ್ಧವಾಗಿದ್ದಾರೆ.

ಪ್ರತಿ ಕೊಠಡಿಯಲ್ಲಿ 12 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಮಾಡಲಾಗಿದೆ. ಸ್ಯಾನಿಟೈಸರ್, ಮಾಸ್ಕ್, ಥರ್ಮಲ್ ಸ್ಕಾನರ್​ಗಳನ್ನು ಇಡಲಾಗಿದೆ. ಈವರೆಗೂ ಪರೀಕ್ಷೆ ಬರೆಯಲು ಬರಲಿರುವ ವಿದ್ಯಾರ್ಥಿಗಳಲ್ಲಿ ಸೋಂಕಿನ ಲಕ್ಷಣ ಕಂಡು ಬಂದಿಲ್ಲ. ಪರೀಕ್ಷೆ ಬರೆಯಲು ಬಂದವರಲ್ಲಿ ಲಕ್ಷಣಗಳು ಕಂಡು ಬಂದರೆ ಅವರಿಗೆ ವೈದ್ಯಕೀಯ ಸೇವೆ ನೀಡಲು ಸಹ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ: ದಾವಣಗೆರೆ ಜಿಲ್ಲೆಯಲ್ಲಿ ಅಬ್ಬರಿಸಿದ ವರುಣ.. ಮಳೆಗೆ ನಲುಗಿದ ಜನ

ಇನ್ನು 2,982 ಸಿಬ್ಬಂದಿ ಪರೀಕ್ಷೆಯ ಕರ್ತವ್ಯ ನಿರ್ವಹಿಸಲಿದ್ದಾರೆ‌. ಈ ಸಿಬ್ಬಂದಿ ಪೈಕಿ 625 ಸಿಬ್ಬಂದಿ ಲಸಿಕೆಯ ಎರಡೂ ಡೋಸ್​​ ಪಡೆದಿದ್ದಾರೆ. ಉಳಿದಂತೆ ಎಲ್ಲ ಸಿಬ್ಬಂದಿ ಒಂದು ಡೋಸ್ ಕೊರೊನಾ ಲಸಿಕೆ ಪಡೆದಿದ್ದಾರೆ. ಜಿಲ್ಲಾ ಪಂಚಾಯತ್ ಸಿಇಓ ಫೌಜಿಯಾ ತರನುಮ್ ಅವರು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ವಿದ್ಯಾರ್ಥಿಗಳು ಯಾವುದೇ ರೀತಿಯಲ್ಲಿ ಗೊಂದಲಕ್ಕೊಳಗಾಗದೆ ಧೈರ್ಯದಿಂದ ಪರೀಕ್ಷೆ ಬರೆಯುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.