ಗಂಗಾವತಿ: ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇರೆಗೆ ಸ್ಥಳೀಯ ಪ್ರಭಾವಿ ನಾಯಕರೊಬ್ಬರ ಆಪ್ತನ ಬಾರ್ ಮತ್ತು ರೆಸ್ಟೋರೆಂಟ್ ಮೇಲೆ ಪೊಲೀಸರು ದಾಳಿ ಮಾಡಿದ ಘಟನೆ ಕನಕಗಿರಿಯಲ್ಲಿ ನಡೆದಿದೆ.
ಕನಕಗಿರಿ ಪಟ್ಟಣದಲ್ಲಿರುವ ಪಕ್ಷವೊಂದರ ಮುಖಂಡರೊಬ್ಬರಿಗೆ ಸೇರಿದ್ದ ಬಾರ್ ಅಂಡ್ ರೆಸ್ಟೋರೆಂಟ್ ಮೇಲೆ ದಾಳಿ ಮಾಡಿದ ಪೊಲೀಸರು ನಾಲ್ವರು ಯುವಕರನ್ನು ಬಂಧಿಸಿ ಇಬ್ಬರು ಯುವತಿಯರನ್ನು ರಕ್ಷಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಸಿಂಧನೂರು ತಾಲೂಕಿನವರು ಎಂದು ಗುರುತಿಸಲಾಗಿದೆ. ಹಂಚಿನಾಳದ ಆರೋಪಿಗಳು ಮಹಿಳೆಯರನ್ನು ಕರೆತಂದು ವೇಶ್ಯಾವಾಟಿಕೆಗೆ ಪ್ರೋತ್ಸಾಹಿಸುತ್ತಿದ್ದರು. ಇದಕ್ಕೆ ಗಂಗಾವತಿಯ ಇಬ್ಬರು ಆರೋಪಿಗಳು ಪಿಂಪ್ ಕೆಲಸ ಮಾಡುತ್ತಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.