ಕೊಪ್ಪಳ: ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಜಾನುವಾರುಗಳನ್ನು ಅವು ಕಸಾಯಿಖಾನೆ ಪಾಲಾಗುವ ಮೊದಲೇ ಜಿಲ್ಲೆಯ ವಿವಿಧ ಸಂಘಟನೆಗಳ ಕಾರ್ಯಕರ್ತರು ಕನಕಗಿರಿ ಪಟ್ಟಣದಲ್ಲಿ ರಕ್ಷಿಸಿದ್ದಾರೆ.
ರಾಯಚೂರು ಜಿಲ್ಲೆಯ ಸಿಂಧನೂರಿನಿಂದ ಕೊಪ್ಪಳಕ್ಕೆ ಅಕ್ರಮವಾಗಿ ಸುಮಾರು 10ಕ್ಕೂ ಹೆಚ್ಚು ಜಾನುವಾರುಗಳನ್ನು ಸಾಗಸಲಾಗುತ್ತಿತ್ತು. ವಾಹನದಲ್ಲಿ ಸಾಗಿಸಲಾಗುತ್ತಿದ್ದ ಜಾನುವಾರುಗಳ ಬಗ್ಗೆ ಅನುಮಾನಗೊಂಡ ಸ್ಥಳೀಯ ವಿವಿಧ ಸಂಘಟನೆಗಳ ಕಾರ್ಯಕರ್ತರು ವಾಹನ ತಡೆದು ಜಾನುವಾರುಗಳನ್ನು ರಕ್ಷಿಸಿದ್ದಾರೆ.
ಈ ಬಗ್ಗೆ ಕನಕಗಿರಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿದರು.