ETV Bharat / state

ವಿದೇಶಿ ಹಾಲಿನ ಉತ್ಪನ್ನಗಳ ಮುಕ್ತ ಮಾರಾಟಕ್ಕೆ ಸರ್ಕಾರ ಅನುಮತಿ ವಿರೋಧಿಸಿ ಪ್ರತಿಭಟನೆ.. - ಕೊಪ್ಪಳದಲ್ಲಿ ನಡೆದ ಇತ್ತೀಚಿನ ಪ್ರತಿಭಟನೆ

ವಿದೇಶಿ ಹಾಲಿನ ಉತ್ಪನ್ನಗಳ ಮುಕ್ತ ಮಾರಾಟಕ್ಕೆ ಸರ್ಕಾರ ಅನುಮತಿ ನೀಡಬಾರದು ಎಂದು ಆಗ್ರಹಿಸಿ ಕೊಪ್ಪಳದ ಕುಷ್ಟಗಿಯಲ್ಲಿ ಪ್ರತಿಭಟನೆ ನಡೆಸಲಾಗಿದೆ.

ಕೊಪ್ಪಳದಲ್ಲಿ ಪ್ರತಿಭಟನೆ
author img

By

Published : Oct 18, 2019, 11:11 AM IST

ಕೊಪ್ಪಳ:ವಿದೇಶಿ ಹಾಲಿನ ಉತ್ಪನ್ನಗಳ ಮುಕ್ತ ಮಾರಾಟಕ್ಕೆ ಸರ್ಕಾರ ಅನುಮತಿ ನೀಡಬಾರದು ಎಂದು ಆಗ್ರಹಿಸಿ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರು ಜಿಲ್ಲೆಯ ಕುಷ್ಟಗಿ ಪಟ್ಟಣದಲ್ಲಿ ಮೌನ ಪ್ರತಿಭಟನೆ ನಡೆಸಿದರು.

ಕೊಪ್ಪಳದಲ್ಲಿ ಪ್ರತಿಭಟನೆ

ಕುಷ್ಟಗಿ ತಹಶೀಲ್ದಾರ್​ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತಹಶೀಲ್ದಾರರ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಅಂತಾರಾಷ್ಟ್ರೀಯ ಹಾಲು ಮತ್ತು ಹಾಲಿನ ಉತ್ಪನ್ನಗಳ ಮುಕ್ತ ಮಾರಾಟದ ಒಪ್ಪಂದಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಇದರಿಂದ ಸ್ಥಳೀಯ ಹೈನೋದ್ಯಮದ ಮೇಲೆ ತುಂಬಾ ಕೆಟ್ಟ ಪರಿಣಾಮ ಬೀರಲಿದೆ. ಹೈನುಗಾರಿಕೆ ನಂಬಿಕೊಂಡು ಇಲ್ಲಿ ಸಾವಿರಾರು ಕುಟುಂಬಗಳು ಜೀವನ ಸಾಗಿಸುತ್ತಿವೆ. ಈ ಒಪ್ಪಂದದಿಂದ ಇಲ್ಲಿನ ಹಾಲು ಮತ್ತು ಹಾಲಿನ ಉತ್ಪನ್ನಗಳಗೆ ಬೇಡಿಕೆ ಕಡಿಮೆಯಾಗಲಿದೆ. ಹೀಗಾಗಿ, ಅಂತಾರಾಷ್ಟೀಯ ಹಾಲು ಮತ್ತು ಹಾಲಿನ ಉತ್ಪನ್ನಗಳು ಮುಕ್ತ ಮಾರಾಟದ ಒಪ್ಪಂದ‌ ಕೈಬಿಡಬೇಕು ಎಂದು ಪ್ರತಿಭಟನಾಕಾರರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು. ಬಾಲಜ್ಜ, ಪಾರಮ್ಮ, ಚಂದ್ರಪ್ಪ ಸೇರಿದಂತೆ ಹಾಲು ಉತ್ಪಾದಕ ಸಹಕಾರ ಸಂಘಗಳ ಸದಸ್ಯರು, ಮುಖಂಡರು ಉಪಸ್ಥಿತರಿದ್ದರು.

Intro:Body:ಕೊಪ್ಪಳ:- ವಿದೇಶಿ ಹಾಲಿನ ಉತ್ಪನ್ನಗಳ ಮುಕ್ತ ಮಾರಾಟಕ್ಕೆ ಸರ್ಕಾರ ಅನುಮತಿ ನೀಡಬಾರದು ಎಂದು ಆಗ್ರಹಿಸಿ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರು ಜಿಲ್ಲೆಯ ಕುಷ್ಟಗಿ ಪಟ್ಟಣದಲ್ಲಿ ಮೌನಪ್ರತಿಭಟನೆ ನಡೆಸಿದರು. ಕುಷ್ಟಗಿ ತಹಸೀಲ್ದಾರ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತಹಸೀಲ್ದಾರರ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಅಂತರಾಷ್ಟ್ರೀಯ ಹಾಲು ಮತ್ತು ಹಾಲಿನ ಉತ್ಪನ್ನಗಳ ಮುಕ್ತ ಮಾರಾಟದ ಒಪ್ಪಂದಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಇದರಿಂದ ಸ್ಥಳೀಯ ಹೈನೋದ್ಯಮದ ಮೇಲೆ ತುಂಬಾ ಕೆಟ್ಟ ಪರಿಣಾಮ ಬೀರಲಿದೆ. ಹೈನುಗಾರಿಕೆ ನಂಬಿಕೊಂಡು ಇಲ್ಲಿ ಸಾವಿರಾರು ಕುಟುಂಬಗಳು ಜೀವನ ಸಾಗಿಸುತ್ತಿವೆ. ಈ ಒಪ್ಪಂದದಿಂದ ಇಲ್ಲಿನ ಹಾಲು ಮತ್ತು ಹಾಲಿನ ಉತ್ಪನ್ನಗಳಗೆ ಬೇಡಿಕೆ ಕಡಿಮೆಯಾಗಲಿದೆ. ಹೀಗಾಗಿ, ಅಂತರಾಷ್ಟೀಯ ಹಾಲು ಮತ್ತು ಹಾಲಿನ ಉತ್ಪನ್ನಗಳು ಮುಕ್ತ ಮಾರಾಟದ ಒಪ್ಪಂದ‌ ಕೈಬಿಡಬೇಕು ಎಂದು ಪ್ರತಿಭಟನಾಕಾರರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು. ಬಾಲಜ್ಜ, ಪಾರಮ್ಮ, ಚಂದ್ರಪ್ಪ ಸೇರಿದಂತೆ ಹಾಲು ಉತ್ಪಾದಕ ಸಹಕಾರ ಸಂಘಗಳ ಸದಸ್ಯರು, ಮುಖಂಡರು ಉಪಸ್ಥಿತರಿದ್ದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.