ETV Bharat / state

ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿಗಳ ಸಾವಿಗೆ ನಿರ್ಲಕ್ಷತೆ ಕಾರಣ.. ವಿವಿಧ ಸಂಘಟನೆಗಳ ಕಿಡಿ.. - Koppal district news

ಕೊಪ್ಪಳದಲ್ಲಿ ಬಿಸಿಎಂ ಹಾಸ್ಟೆಲ್ ನ ಐವರು ವಿದ್ಯಾರ್ಥಿಗಳು ಸಾವನ್ನಪ್ಪಲು ಅಧಿಕಾರಿಗಳ ನಿರ್ಲಕ್ಷತೆ ಕಾರಣ ಎಂದು ಆರೋಪಿಸಿ ಎಐಡಿಎಸ್ಒ, ಎಸ್ಎಫ್ಐ, ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ವಿದ್ಯಾರ್ಥಿಗಳ ಸಾವು ಖಂಡಿಸಿ ಪ್ರತಿಭಟನೆ
author img

By

Published : Aug 19, 2019, 6:09 PM IST

ಕೊಪ್ಪಳ : ನಗರದ ಬನ್ನಿಕಟ್ಟೆ ಪ್ರದೇಶದಲ್ಲಿರುವ ಬಿಸಿಎಂ ಹಾಸ್ಟೆಲ್‌ನಲ್ಲಿ ನಿನ್ನೆ ವಿದ್ಯುತ್ ಸ್ಪರ್ಶಿಸಿ ಐವರು ವಿದ್ಯಾರ್ಥಿಗಳು ಸಾವನ್ನಪ್ಪಲು ನಿರ್ಲಕ್ಷತೆಯೇ ಕಾರಣ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಅಂತಾ ಆಗ್ರಹಿಸಿ ನಗರದಲ್ಲಿಂದು ವಿವಿಧ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿದವು‌.

ಎಐಡಿಎಸ್ಒ, ಎಸ್ಎಫ್ಐ, ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರದ ಸರ್ಕಾರಿ ಮಹಿಳಾ ಪದವಿ ಕಾಲೇಜ್‌ನಿಂದ ಪ್ರತಿಭಟನಾ ಮೆರವಣಿಗೆ ಹೊರಟು ತಹಶೀಲ್ದಾರ್‌ ಕಚೇರಿಗೆ ತೆರಳಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿಗಳ ಸಾವು ಖಂಡಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ..

ವಿದ್ಯಾರ್ಥಿಗಳ ಸಾವಿಗೆ ಅಧಿಕಾರಿಗಳು ಹಾಗೂ ಹಾಸ್ಟೆಲ್ ವಾರ್ಡನ್, ಸಿಬ್ಬಂದಿಯ ನಿರ್ಲಕ್ಷತೆ ಕಾರಣ. ಅವರೆಲ್ಲಾ ವಿದ್ಯಾರ್ಥಿಗಳ ಪ್ರಾಣದ ಜೊತೆಗೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಘಟನೆಯಲ್ಲಿ ಮೃತಪಟ್ಟಿರುವ ವಿದ್ಯಾರ್ಥಿಗಳಿಗೆ ಇನ್ನೂ ಹೆಚ್ಚಿನ ಪರಿಹಾರ ನೀಡಬೇಕು ಹಾಗೂ ಅವರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ ಕಲ್ಪಿಸಿಕೊಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Intro:

Body:ಕೊಪ್ಪಳ:- ನಗರದ ಬನ್ನಿಕಟ್ಟೆ ಪ್ರದೇಶದಲ್ಲಿರುವ ಬಿಸಿಎಂ ಹಾಸ್ಟೆಲ್ ನಲ್ಲಿ ನಿನ್ನೆ ವಿದ್ಯುತ್ ಸ್ಪರ್ಶಿಸಿ ಐವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಖಂಡಿಸಿ ನಗರದಲ್ಲಿ ಇಂದು ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು‌. ಎಐಡಿಎಸ್ಓ, ಎಸ್ಎಫ್ಐ, ಎಬಿವಿಪಿ ಕಾರ್ಯಕರ್ತರು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಎಐಡಿಎಸ್ಓ ಹಾಗೂ ಎಸ್ಎಫ್ಐ ಸಂಘಟನೆಯ ಕಾರ್ಯಕರ್ತರು ಜಂಟಿಯಾಗಿ ನಗರದ ಅಶೋಕ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಇನ್ನು ಎಬಿವಿಪಿ ಕಾರ್ಯಕರ್ತರು ನಗರದ ಸರ್ಕಾರಿ ಮಹಿಳಾ ಪದವಿ ಕಾಲೇಜ್ ನಿಂದ ಪ್ರತಿಭಟನಾ ಮೆರವಣಿಗೆ ಹೊರಟು ತಹಸೀಲ್ದಾರ ಕಚೇರಿಗೆ ತೆರಳಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಬಿಸಿಎಂ ಹಾಸ್ಟೆಲ್ ನಲ್ಲಿ ವಿದ್ಯುತ್ ತಗುಲಿ ಐವರು ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ಇದು ಅಧಿಕಾರಿಗಳ ಹಾಗೂ ಹಾಸ್ಟೆಲ್ ವಾರ್ಡನ್ ಸಿಬ್ಬಂದಿಯ ದಿವ್ಯ ನಿರ್ಲಕ್ಷ್ಯದಿಂದ ಆಗಿರುವ ಘಟನೆ. ವಿದ್ಯಾರ್ಥಿಗಳ ಪ್ರಾಣದ ಜೊತೆಗೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಖಾಸಗಿ ಕಟ್ಟಡದಲ್ಲಿರುವ ಹಾಸ್ಟೆಲ್ ಗಳನ್ನು ಸ್ವಂತ ಕಟ್ಟಡಗಳಿಗೆ ಶಿಫ್ಟ್ ಮಾಡಬೇಕು. ವಿದ್ಯಾರ್ಥಿಗಳಿಗೆ ಸುರಕ್ಷಿತೆಯನ್ನು ಒದಗಿಸಬೇಕು. ಘಟನೆಯಲ್ಲಿ ಮೃತಪಟ್ಟಿರುವ ವಿದ್ಯಾರ್ಥಿಗಳಿಗೆ ಇನ್ನೂ ಹೆಚ್ಚಿನ ಪರಿಹಾರ ನೀಡಬೇಕು ಹಾಗೂ ಅವರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ ಕಲ್ಪಿಸಿಕೊಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.