ETV Bharat / state

ಪತ್ರಕರ್ತ ಸಿರಾಜ್ ಬಿಸರಳ್ಳಿ ವಿರುದ್ಧ ಎಫ್ಐಆರ್​ ಖಂಡಿಸಿ ಪ್ರತಿಭಟನೆ - koppala Karnataka Organization activists Protest

ಕವಿ, ಪತ್ರಕರ್ತ ಸಿರಾಜ್ ಬಿಸರಳ್ಳಿ ವಿರುದ್ಧ ಎಫ್ಐಆರ್ ದಾಖಲಿಸಿರುವುದನ್ನು ಖಂಡಿಸಿ ಸಂವಿಧಾನ ಉಳಿಸಿ ಆಂದೋಲನ ಸಮಿತಿ ಹಾಗೂ ಸೌಹಾರ್ದತೆಗಾಗಿ ಕರ್ನಾಟಕ ಸಂಘಟನೆ ಕಾರ್ಯಕರ್ತರು ನಗರದಲ್ಲಿ ಜಂಟಿಯಾಗಿ ಪ್ರತಿಭಟನೆ ನಡೆಸಿದರು.

Protest
ಪ್ರತಿಭಟನೆ
author img

By

Published : Jan 31, 2020, 12:07 AM IST

ಕೊಪ್ಪಳ: ಇತ್ತೀಚಿಗೆ ನಡೆದ ಆನೆಗುಂದಿ ಉತ್ಸವದಲ್ಲಿ ನೀ ಯಾವಾಗ ನೀಡುತ್ತಿ ದಾಖಲೆ ಎಂಬ ಕವಿತೆ ವಾಚಿಸಿದ್ದ ಕವಿ, ಪತ್ರಕರ್ತ ಸಿರಾಜ್ ಬಿಸರಳ್ಳಿ ವಿರುದ್ಧ ಎಫ್ಐಆರ್ ದಾಖಲಿಸಿರುವುದನ್ನು ಖಂಡಿಸಿ ಸಂವಿಧಾನ ಉಳಿಸಿ ಆಂದೋಲನ ಸಮಿತಿ ಹಾಗೂ ಸೌಹಾರ್ದತೆಗಾಗಿ ಕರ್ನಾಟಕ ಸಂಘಟನೆ ಕಾರ್ಯಕರ್ತರು ನಗರದಲ್ಲಿ ಜಂಟಿಯಾಗಿ ಪ್ರತಿಭಟನೆ ನಡೆಸಿದರು.

ನಗರದ ಸಾಹಿತ್ಯ ಭವನದ ಬಳಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ ಧರ್ಮದ ಆಧಾರದ ಮೇಲೆ ಸಿಎಎ, ಎನ್ಆರ್​ಸಿ ಹಾಗೂ ಎನ್​ಪಿಆರ್​ ಕಾಯ್ದೆ ಜಾರಿ ಮಾಡಿದೆ. ಇದು ನಮ್ಮ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಇದರ ಜೊತೆಗೆ ಅಭಿವ್ಯಕ್ತಿ ಸ್ವಾತಂತ್ರ್ಯ ಹತ್ತಿಕ್ಕುವ ಪ್ರಯತ್ನ ನಡೆದಿದೆ. ಆನೆಗುಂದಿ ಉತ್ಸವದಲ್ಲಿ ನಿನ್ನ ದಾಖಲೆಗಳನ್ನು ಯಾವಾಗ ನೀಡುತ್ತಿ ಎಂಬ ಕವಿತೆಯನ್ನು ವಾಚಿಸಿದ ಕವಿ, ಪತ್ರಕರ್ತ ಸಿರಾಜ್ ಬಿಸರಳ್ಳಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಪತ್ರಕರ್ತ ಸಿರಾಜ್ ಬಿಸರಳ್ಳಿ ವಿರುದ್ಧ ಎಫ್ಐಆರ್ ಖಂಡಿಸಿ ಕೊಪ್ಪಳದಲ್ಲಿ ಪ್ರತಿಭಟನೆ

ಇದು ಅಭಿವ್ಯಕ್ತಿ ಸ್ವಾತಂತ್ರ್ಯ ಹತ್ತಿಕ್ಕುವ ಪ್ರಯತ್ನ. ಆದರೆ, ಒಬ್ಬ ಕವಿಯು ಜನರ ಆಶಯಗಳ ಪ್ರತಿನಿಧಿಯಾಗಿ ಕಾವ್ಯ ರಚಿಸುತ್ತಾನೆ. ಇದಕ್ಕೆ ನಾವು ಹೆದರುವುದಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಅನೇಕರು ಬಹಿರಂಗ ಕವಿಗೋಷ್ಠಿ ನಡೆಸುವ ಸರ್ಕಾರದ‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಹಾಗೂ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಬಂಡಾಯ ಸಾಹಿತಿ ಪ್ರೊ. ಅಲ್ಲಮಪ್ರಭು ಬೆಟ್ಟದೂರು, ವಿಠ್ಠಪ್ಪ ಗೋರಂಟ್ಲಿ, ಡಾ. ವಿ.ಬಿ. ರಡ್ಡೇರ್, ಬಸವರಾಜ ಶೀಲವಂತರ, ಕಾಸಿಂ ಸರ್ದಾರ್ ಸೇರಿದಂತೆ ಮೊದಲಾದವರು ನೇತೃತ್ವ ವಹಿಸಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.