ಗಂಗಾವತಿ: ಪದವಿ ಮತ್ತು ಸ್ನಾತಕೋತ್ತರ ಪದವಿ ಸೆಮಿಸ್ಟರ್ ಪರೀಕ್ಷಾ ಶುಲ್ಕ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಕೊಲ್ಲಿ ನಾಗೇಶ್ವರರಾವ್ ಗಂಗಯ್ಯ ಸ್ಮಾರಕ ಪ್ರಥಮ ದರ್ಜೆ ಕಾಲೇಜು ಮುಂದೆ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಪ್ರಾಂಶುಪಾಲ ಜಿ.ಎನ್. ಹೆಬ್ಸೂರು ಮೂಲಕ ಕುಲಪತಿಗೆ ಮನವಿ ಸಲ್ಲಿಸಿದರು. ಕೊರೊನಾ ಪ್ರೇರೇಪಿತ ಲಾಕ್ಡೌನ್ ವೇಳೆ ಕೆಲಸವಿಲ್ಲದೆ ಪಾಲಕರು ಪರದಾಡಿದ್ದಾರೆ. ಇಂತಹ ಸಮಯದಲ್ಲಿ ಪರೀಕ್ಷಾ ಶುಲ್ಕ ವಿಧಿಸದಂತೆ ಮನವಿ ಮಾಡಿದರು.
ಕೆಲಸ ಇಲ್ಲದೆ, ಆದಾಯವಿಲ್ಲದೇ ಜೀವನ ನಡೆಸುವುದು ಕಷ್ಟವಾಗಿದೆ. ಸಾವಿರಾರು ರೂಪಾಯಿ ಪರೀಕ್ಷಾ ಶುಲ್ಕ ಕಟ್ಟವುದು ಬಡ ವಿದ್ಯಾರ್ಥಿಗಳ ಪೋಷಕರಿಗೆ ಸಾಧ್ಯವಾಗುವುದಿಲ್ಲ. ಆರ್ಥಿಕ ಸಂಕಷ್ಟದಿಂದ ಕೆಲವು ಪೋಷಕರು ತಮ್ಮ ಮಕ್ಕಳ ಶಿಕ್ಷಣ ಮೊಟಕುಗೊಳಿಸಲು ಮುಂದಾಗಿದ್ದಾರೆ. ಇದನ್ನು ತಡೆಯಲು ಪರೀಕ್ಷಾ ಶುಲ್ಕ ಮನ್ನಾ ಮಾಡಬೇಕು ಎಂದು ಬಳ್ಳಾರಿಯ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿಗೆ ಬರೆದ ಪತ್ರದಲ್ಲಿ ವಿದ್ಯಾರ್ಥಿಗಳು ಉಲ್ಲೇಖಿಸಿದ್ದಾರೆ.