ಕೊಪ್ಪಳ: ಉತ್ತರ ಪ್ರದೇಶದಲ್ಲಿ ಯುವತಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಗಳನ್ನು ಗಲ್ಲಿಗೇರಿಸುವಂತೆ ಆಗ್ರಹಿಸಿ ವಾಲ್ಮೀಕಿ ಸಮುದಾಯದ ಮುಖಂಡರು ಪ್ರತಿಭಟನೆ ನಡೆಸಿದರು.
ನಾಲ್ವರು ದುಷ್ಟರು ಯುವತಿಯ ಮೇಲೆ ಅತ್ಯಾಚಾರ ಮಾಡಿ ನಾಲಿಗೆ ಕತ್ತರಿಸಿ, ಕೊಲೆ ಮಾಡಿ ಕ್ರೂರತೆ ಮೆರೆದಿದ್ದಾರೆ. ಅಲ್ಲದೆ ಪೊಲೀಸರ ಸಹಾಯದೊಂದಿಗೆ ರಾತ್ರೋರಾತ್ರಿ ಶವ ಸುಟ್ಟು ಹಾಕಿದ್ದಾರೆ ಎಂದು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದರು.
ದೇಶದಲ್ಲಿ ಇದುವರೆಗೂ ಮಹಿಳೆಯರು ಸ್ವಾವಲಂಬಿಯಾಗಿ ಬದುಕಲು ಆಗುತ್ತಿಲ್ಲ. ಮಹಿಳೆಯರ ಮೇಲಿನ ಅತ್ಯಾಚಾರ, ದೌರ್ಜನ್ಯ ನಿಲ್ಲುತ್ತಿಲ್ಲ. ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕಾನೂನು ಜಾರಿಗೊಳಿಸಬೇಕು ಹಾಗೂ ಘಟನೆಯ ಆರೋಪಿಗಳನ್ನು ಗಲ್ಲಿಗೇರಿಸಬೇಕು. ಅವರಿಗೆ ಸಹಕಾರ ನೀಡಿದ ಪೊಲೀಸ್ ಅಧಿಕಾರಿಗಳನ್ನು ಕರ್ತವ್ಯದಿಂದ ವಜಾಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.