ಕೊಪ್ಪಳ : ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಕರೆ ನೀಡಲಾಗಿರುವ ಬಂದ್ಗೆ ಬೆಂಬಲಿಸಿ ಕೊಪ್ಪಳದಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರಿಂದ ಪ್ರತಿಭಟನೆ ಪ್ರಾರಂಭವಾಗಿದೆ.
ಬೆಳಗ್ಗೆಯಿಂದಲೇ ರಸ್ತೆಗಿಳಿದಿರುವ ಕಾರ್ಯಕರ್ತರು, ನಗರದ ಕೇಂದ್ರೀಯ ಬಸ್ ನಿಲ್ದಾಣದ ಮುಂದಿನ ರಸ್ತೆಯಲ್ಲಿ ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ನಗರದ ಕೇಂದ್ರೀಯ ಬಸ್ ನಿಲ್ದಾಣದಿಂದ ಬೆಳಗ್ಗೆ ಹೊರಟಿದ್ದ ಬಸ್ಗಳನ್ನು ತಡೆದು ಬಸ್ ಸಂಚಾರವನ್ನು ಸ್ಥಗಿತಗೊಳಿಸುವಂತೆ ತಾಕೀತು ಮಾಡಿದರು.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕೃತಿಯನ್ನು ಹೊತ್ತು ಅಣುಕು ಶವಯಾತ್ರೆ ನಡೆಸಿದರು. ಈ ಸಂದರ್ಭದಲ್ಲಿ ಅಣುಕು ಶವದ ಮುಂದೆ ಲಬೋ ಲಬೋ ಅಂತಾ ಬಾಯ್ ಬಾಯ್ ಬಡ್ಕೊಂಡು ಕನ್ನಡ ಪರ ಹೋರಾಟಗಾರರು ವಿಭಿನ್ನವಾಗಿ ಪ್ರತಿಭಟಿಸಿದ್ರು. ಇನ್ನು ಬಂದ್ ಹಿನ್ನೆಲೆಯಲ್ಲಿ ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.