ಕುಷ್ಟಗಿ: ಕೃಷಿ ಕ್ಷೇತ್ರವನ್ನು ಕಾರ್ಪೋರೇಟ್ ಕಂಪನಿಗಳಿಗೆ ಒಪ್ಪಿಸುವ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಕರ್ನಾಟಕ ರೈತ ಸಂಘದ (ಎಐಕೆಕೆಎಸ್) ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಶಿರಸ್ತೇದಾರ ಸತೀಶ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಅಬ್ದುಲ್ ನಜೀರಸಾಬ್ ಮೂಲಿಮನಿ ಮಾತನಾಡಿ, ಕೋವಿಡ್-19 ಕಾರಣದಿಂದ ದೇಶದ ಆರ್ಥಿಕತೆ ನೆಲಕಚ್ಚಿದೆ. ಸಣ್ಣ ಮತ್ತು ಮಧ್ಯಮ ಉದ್ಯಮಗಳು ಅತಂತ್ರ ಸ್ಥಿತಿಯಲ್ಲಿವೆ, ಕೋಟ್ಯಂತರ ವಲಸೆ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದು, ದುಡಿಯುವ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಈ ಪರಿಸ್ಥಿತಿಯಲ್ಲಿ ದುಡಿಯುವ ವರ್ಗಕ್ಕೆ ಮರಣ ಶಾಸನವಾಗಿರುವ ಈ ಕಾಯ್ದೆಗಳ ಜಾರಿಗೆ ಮುಂದಾಗಿರುವುದನ್ನು ಅವರು ಪ್ರಶ್ನಿಸಿದರು.