ETV Bharat / state

ವಾಲ್ಮೀಕಿ ಸಮುದಾಯದಕ್ಕೆ ಮೀಸಲಾತಿ ವಿಳಂಬ ಖಂಡಿಸಿ ಪ್ರತಿಭಟನೆ

ವಾಲ್ಮೀಕಿ ಸಮುದಾಯದಕ್ಕೆ ಶೇ. 7.5ರಷ್ಟು ಮೀಸಲು ಸೌಲಭ್ಯ ಕಲ್ಪಿಸಲು ರಾಜ್ಯ ಸರ್ಕಾರ ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ವಾಲ್ಮೀಕಿ ನಾಯಕ ಮಹಾಸಭಾ ನೇತೃತ್ವದಲ್ಲಿ ಪ್ರತಿಭಟಿಸಲಾಯಿತು.

Protest to condemn delay in reservation for Valmiki community
ವಾಲ್ಮೀಕಿ ಸಮುದಾಯದಕ್ಕೆ ಮೀಸಲಾತಿ ವಿಳಂಬ ಖಂಡಿಸಿ ಪ್ರತಿಭಟನೆ
author img

By

Published : Sep 16, 2020, 4:02 PM IST

ಕುಷ್ಟಗಿ (ಕೊಪ್ಪಳ): ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ವಾಲ್ಮೀಕಿ ನಾಯಕ ಸಮುದಾಯಕ್ಕೆ ಶೇ. 7.5ರಷ್ಟು ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ವಾಲ್ಮೀಕಿ ನಾಯಕ ಮಹಾಸಭಾದ ನೇತೃತ್ವದಲ್ಲಿ ಪ್ರತಿಭಟಿಸಲಾಯಿತು.

ವಾಲ್ಮೀಕಿ ಸಮುದಾಯದಕ್ಕೆ ಮೀಸಲಾತಿ ವಿಳಂಬ ಖಂಡಿಸಿ ಪ್ರತಿಭಟನೆ

ಈ ಕುರಿತು ಉಪ ತಹಸೀಲ್ದಾರ್​ ಹೆಚ್.ವಿಜಯಾ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ವಾಲ್ಮೀಕಿ ಸಮಾಜದ ಅಧ್ಯಕ್ಷ ಬಸವರಾಜ್ ನಾಯಕ, ವಾಲ್ಮೀಕಿ ಸಮಾಜವು ರಾಜ್ಯದಲ್ಲಿ 75 ಲಕ್ಷ ಜನಸಂಖ್ಯೆ ಹೊಂದಿರುವ ದೊಡ್ಡ ಸಮಾಜವಾಗಿದೆ. ಈ ಸಮುದಾಯಕ್ಕೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ. 7.5 ಮೀಸಲಾತಿಗಾಗಿ ಸಮಾಜದ ಗುರುಗಳಾದ ರಾಜನಹಳ್ಳಿ ಸ್ವಾಮೀಜಿ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದೆ. ನ್ಯಾಯಮೂರ್ತಿ ನಾಗಮೋಹನದಾಸ್ ಶಿಫಾರಸ್ಸಿನಂತೆ ಈ ಸಮಾಜಕ್ಕೆ ನ್ಯಾಯಯುತ ಮೀಸಲಾತಿ ಕಲ್ಪಿಸಬೇಕು. ಇಲ್ಲವಾದಲ್ಲಿ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಸಿದರು.

ಇದೇ ವೇಳೆ ಯಾದಗಿರಿ ಜಿಲ್ಲೆಯಲ್ಲಿ ವಾಲ್ಮೀಕಿ ಭಾವಚಿತ್ರಕ್ಕೆ ಅವಮಾನಿಸಿದವರನ್ನು ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.