ಕುಷ್ಟಗಿ (ಕೊಪ್ಪಳ): ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಕಾಟಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಾಂಸ್ಥಿಕ ಕ್ವಾರಂಟೈನ್ನಲ್ಲಿದ್ದ ಇಬ್ಬರನ್ನು ಡಿಸ್ಚಾರ್ಜ್ ಮಾಡಲಾಗಿದೆ.
ಮಹಾರಾಷ್ಟ್ರದಿಂದ ಆಗಮಿಸಿದ್ದ ಇವರು ಕಾಟಾಪುರ ಸಾಂಸ್ಥಿಕ ಕ್ವಾರಂಟೈನ್ನಲ್ಲಿದ್ದರು. ಮಾದರಿ ಗಂಟಲು ದ್ರವ ಪರೀಕ್ಷೆಯಲ್ಲಿ ಯಾವುದೇ ಕೊರೊನಾ ಲಕ್ಷಣ ದೃಢವಾಗಿಲ್ಲ. ಕ್ವಾರಂಟೈನ್ ಅವಧಿ ಪೂರೈಸಿದ್ದರಿಂದ ಇಬ್ಬರನ್ನು ಡಿಸ್ಚಾರ್ಜ್ ಮಾಡಲಾಗಿದೆ.
ಈ ಇಬ್ಬರು ಡಿಸ್ಚಾರ್ಜ್ ಅಗುವ ಮೂಲಕ ಕುಷ್ಟಗಿ ತಾಲೂಕಿನಲ್ಲಿ ಸಾಂಸ್ಥಿಕ ಕ್ವಾರಂಟೈನ್ನಲ್ಲಿರುವವರ ಸಂಖ್ಯೆ ಶೂನ್ಯವಾಗಿದ್ದು, ಕುಷ್ಟಗಿ ತಾಲೂಕು ಸೇಫ್ ಝೋನ್ನಲ್ಲಿದೆ ಎನ್ನಲಾಗುತ್ತಿದೆ.