ಗಂಗಾವತಿ (ಕೊಪ್ಪಳ): ತಾಲೂಕಿನ ಮರಳಿ ಗ್ರಾಮದ ಟೋಲ್ ಪ್ಲಾಜಾದ ಬಳಿ ಭಿಕ್ಷಾಟನೆಯಲ್ಲಿ ತೊಡಗಿದ್ದ ಮಂಗಳಮುಖಿಯೊಂದಿಗೆ ವ್ಯಕ್ತಿಯೊಬ್ಬ ವಿನಾಕಾರಣ ಗಲಾಟೆ ತೆಗೆದು ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮರಳಿ ಗ್ರಾಮದ ತಿಪ್ಪೇಸ್ವಾಮಿ ತಿಮ್ಮಪ್ಪ ಕಮ್ಮಾರ ಹಾಗೂ ಹೊಸಕೇರಿ ಗ್ರಾಮದ ಅನುಶ್ರೀ ಲಂಕೆಪ್ಪ ಎಂಬ ಇಬ್ಬರ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ವಾಗ್ವಾದ ಆರಂಭವಾಗಿದೆ. ಬಳಿಕ ಮಾತಿನ ಚಕಮಕಿ ಕೈಮಿಲಾಯಿಸುವ ಹಂತಕ್ಕೆ ಹೋಗಿದ್ದು, ಪರಸ್ಪರ ಬಡಿದಾಡಿಕೊಂಡಿದ್ದಾರೆ. ಈ ವೇಳೆ ಇಬ್ಬರಿಗೂ ಗಾಯಗಳಾಗಿವೆ.
ಇದನ್ನೂ ಓದಿ: ಸಚಿವ ಸಂಪುಟ ಸಭೆ.. ಕರ್ನಾಟಕ ಗೋ ಹತ್ಯೆ ಪ್ರತಿಬಂಧಕ ನಿಯಮ ಸುಗ್ರೀವಾಜ್ಞೆಗೆ ಅನುಮೋದನೆ ಸಾಧ್ಯತೆ
ತಿಳಿ ಹೇಳಿದರೂ ಇಬ್ಬರೂ ಜಗಳ ಬಿಡದಿರುವುದರಿಂದ ಸಾರ್ವಜನಿಕ ಶಾಂತಿ ಹಾಗೂ ಸುವ್ಯವಸ್ಥೆಗೆ ಭಂಗ ಬರುವ ಹಿನ್ನೆಲೆ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೊಪ್ಪಳ ಸಂಚಾರಿ ಠಾಣೆಯ ಪಿಎಸ್ಐ ಅಮರೇಶ ಹುಬ್ಬಳ್ಳಿ ಅವರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.