ETV Bharat / state

ಆನಂದ್ ಸಿಂಗ್ ರಾಜೀನಾಮೆ ವಿಷಯ ನನಗೆ ಗೊತ್ತಿಲ್ಲ: ಹಿಟ್ನಾಳ್​​

ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ, ಶಾಸಕ ಕೆ. ರಾಘವೇಂದ್ರ ಹಿಟ್ನಾಳ್​, ಶಾಸಕ ಆನಂದ್ ಸಿಂಗ್ ಅವರ ರಾಜೀನಾಮೆ ವಿಷಯವನ್ನು ಅಲ್ಲಗಳೆದಿದ್ದಾರೆ.

ಶಾಸಕ ಕೆ. ರಾಘವೇಂದ್ರ ಹಿಟ್ನಾಳ
author img

By

Published : Jul 1, 2019, 3:23 PM IST

ಕೊಪ್ಪಳ: ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ಆನಂದ್ ಸಿಂಗ್ ರಾಜೀನಾಮೆ ನೀಡಿರುವ ವಿಷಯ ನನಗೆ ಗೊತ್ತಿಲ್ಲ. ಆದರೆ, ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ. ಸರ್ಕಾರ ಸುಭದ್ರವಾಗಿರುತ್ತದೆ ಎಂದು ಕಾಂಗ್ರೆಸ್​ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್​ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆನಂದ್​ ಸಿಂಗ್ ಅವರು ಮೂರು ಬಾರಿ ಶಾಸಕರಾಗಿದ್ದಾರೆ. ಅವರು ರಾಜೀನಾಮೆಯಂತಹ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂಬ ವಿಶ್ವಾಸವಿದೆ. ಅವರು ರಾಜೀನಾಮೆ ನೀಡಿರುವ ವಿಷಯ ನನಗೆ ಗೊತ್ತಿಲ್ಲ. ರಾಜೀನಾಮೆ ಕೊಡುತ್ತಾರೆ ಎಂದು ಹೇಳುತ್ತಿರುವ ಶಾಸಕರೆಲ್ಲರೂ ತಮ್ಮ ಕ್ಷೇತ್ರದಲ್ಲಿಯೇ ಇದ್ದಾರೆ‌. ಬೇರೆ ಪಕ್ಷದವರು ನಮ್ಮ ಪಕ್ಷಕ್ಕೆ ಬರುತ್ತಾರೆ ಎಂಬ ಮಾಹಿತಿಯೂ ಇದೆ‌ ಎಂದು ಪರೋಕ್ಷವಾಗಿ ಆಪರೇಷನ್​ ಬಿಜೆಪಿ ಬಗ್ಗೆ ಮಾಹಿತಿ ನೀಡಿದರು. ಪತ್ರಕರ್ತರು ಯಾರು ಎಂದು ಕೇಳಿದಾಗ, ಅವುಗಳ ಪಟ್ಟಿ ನೀವೇ ಮಾಡಿದವರು ಎನ್ನುವ ಮೂಲಕ ಹೆಸರು ಹೇಳದೇ ಮೌನವಹಿಸಿದ್ದರು.

ಶಾಸಕ ಆನಂದ್ ಸಿಂಗ್ ರಾಜೀನಾಮೆ ಬಗ್ಗೆ ಶಾಸಕ ಹಿಟ್ನಾಳ್​ ಪ್ರತಿಕ್ರಿಯೆ

ಆನಂದ್ ಸಿಂಗ್ ಅವರು ರಾಜ್ಯಪಾಲರನ್ನು ಭೇಟಿಯಾದರೆ ಸಮಸ್ಯೆ ಏನು? ಭೇಟಿ ಆಗಲೇಬಾರದಾ? ಕ್ಷೇತ್ರದ ಸಮಸ್ಯೆಗಳ ಬಗ್ಗೆ ಅವರು ಭೇಟಿಯಾಗಿರಬಹುದು ಎಂದು ಆನಂದ್ ಸಿಂಗ್ ಕೊಟ್ಟ ರಾಜೀನಾಮೆ ಸುದ್ದಿಯನ್ನು ಅಲ್ಲಗಳೆದರು.

ಸಮ್ಮಿಶ್ರ ಸರ್ಕಾರ ರಚನೆಯಾದಾಗಿನಿಂದಲೂ ಶಾಸಕರು ರಾಜೀನಾಮೆ ಕೊಡುತ್ತಾರೆ ಎಂಬ ಸುದ್ದಿಗಳೇ ಹರಿದಾಡುತ್ತಿವೆ. ಕೊಟ್ಟರೂ ಸರ್ಕಾರಕ್ಕೆ ಏನೂ ಆಗಲ್ಲ. ನಾನು ಈಗಾಗಲೇ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಯಾಗಿದ್ದೇನೆ ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ್​ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Intro:

Body:ಕೊಪ್ಪಳ:- ವಿಜಯನಗರ ಶಾಸಕ ಆನಂದ್ ಸಿಂಗ್ ರಾಜಿನಾಮೆ ನೀಡಿರುವ ವಿಷಯ ನನಗೆ ಗೊತ್ತಿಲ್ಲ. ಆದರೆ, ಸರ್ಕಾರಕ್ಕೆ ಯಾವುದೇ ಅಸ್ಥಿರತೆ ಇಲ್ಲ, ಸರ್ಕಾರ ಸುಭದ್ರವಾಗಿರುತ್ತದೆ ಎಂದು ಕೊಪ್ಪಳ ಕ್ಷೇತ್ರದ ಕೈ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆನಂದಸಿಂಗ್ ಅವರು ಮೂರು ಬಾರಿ ಶಾಸಕರಾಗಿದ್ದಾರೆ. ಅವರು ರಾಜಿನಾಮೆಯಂತಹ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂಬ ವಿಶ್ವಾಸವಿದೆ. ಅವರು ರಾಜಿನಾಮೆ ನೀಡಿರುವ ವಿಷಯ ನನಗೆ ಗೊತ್ತಿಲ್ಲ. ರಾಜಿನಾಮೆ ಕೊಡುತ್ತಾರೆ ಎಂದು ಹೇಳುತ್ತಿರುವ ಶಾಸಕರೆಲ್ಲರೂ ತಮ್ಮ ಕ್ಷೇತ್ರದಲ್ಲಿಯೇ ಇದ್ದಾರೆ‌. ಬೇರೆ ಪಕ್ಷದವರು ನಮ್ಮ ಪಕ್ಷಕ್ಕೆ ಬರುತ್ತಾರೆ ಎಂಬ ಮಾಹಿತಿ ಇದೆ‌. ಮಾಧ್ಯಮದವರು ನೀವೆ ಆಪರೇಷನ್ ಮಾಡುತ್ತೀರಿ. ಆನಂದ್ ಸಿಂಗ್ ಅವರು ರಾಜ್ಯಪಾಲರನ್ನು ಭೇಟಿಯಾದರೆ ಸಮಸ್ಯೆ ಏನ? ಏಕೆ ಭೇಟಿಯಾಗಬಾರದಾ? ಕ್ಷೇತ್ರದ ಸಮಸ್ಯೆಗಳ ಬಗ್ಗೆ ಅವರು ಭೇಟಿಯಾಗಿರಬಹುದು ಎಂದರು. ಅಲ್ಲದೆ, ರಾಜ್ಯ ಸಮ್ಮಿಶ್ರ ಸರ್ಕಾರ ರಚನೆಯಾದಾಗಿನಿಂದಲೂ ಶಾಸಕರು ರಾಜಿನಾಮೆ ಕೊಡ್ತಾರೆ ಎಂಬ ಸುದ್ದಿಗಳಿವೆ. ಆದರೆ, ಸರ್ಕಾರಕ್ಕೆ ಏನೂ ಆಗಿಲ್ಲ. ನಾನು ಈಗಾಗಲೇ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಯಾಗಿದ್ದೇನೆ ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.