ಕೊಪ್ಪಳ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರೈತ ಸಂಘದ ಕಾರ್ಯಕರ್ತರು ನಗರದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ 5ನೇ ದಿನಕ್ಕೆ ಕಾಲಿಟ್ಟಿದೆ.
ಕಳೆದ ಜನವರಿ 16ರಿಂದ ನಗರದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತಿದೆ. ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.
ತಾಲೂಕಿನ ನರೇಗಲ್ ಗ್ರಾಮದ ಸರ್ವೆ ನಂಬರ್ 62/2 ರಲ್ಲಿನ 9 ಎಕರೆ ಪ್ರದೇಶದಲ್ಲಿ ಮರಳು ಗಣಿಗಾರಿಕೆ ನಡೆಸಲು ಅನುಮತಿ ನೀಡಲಾಗಿದೆ. ಇಲ್ಲಿ ಮರಳು ಗಣಿಗಾರಿಕೆ ನಡೆಸಿದರೆ ಹಳ್ಳದ ನೀರು ಗ್ರಾಮಕ್ಕೆ ನುಗ್ಗುತ್ತದೆ. ಸುಳ್ಳು ವರದಿ ನೀಡಿ ಅಧಿಕಾರಿಗಳು ದಿಕ್ಕುತಪ್ಪಿಸುತ್ತಿದ್ದಾರೆ. ಕೂಡಲೇ ಮರಳು ಗಣಿಗಾರಿಕೆ ಸ್ಥಗಿತಗೊಳಿಸಬೇಕು. ಅಕ್ರಮ ಸಕ್ರಮ ಯೋಜನೆಯಲ್ಲಿ ಅರ್ಜಿ ಸಲ್ಲಿಸಿರುವ ಜನರಿಗೆ ಹಕ್ಕುಪತ್ರ ನೀಡಬೇಕು.
ತಾಲೂಕಿನ ಭಾಗ್ಯ ನಗರದಲ್ಲಿರುವ ಅಲೆಮಾರಿ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡುವುದು ಸೇರಿದಂತೆ ಅನೇಕ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.