ಗಂಗಾವತಿ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ತಾಲ್ಲೂಕಿನ ಢಣಾಪುರ ಗ್ರಾಮದ ಯುವಕನನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ.
ಆಚಾರ ನರಸಾಪುರ ಗ್ರಾಮದ ಪರಶುರಾಮ ಎಂಬ ಯುವಕನ ಮೇಲೆ ಸ್ವತಃ ಬಾಲಕಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿದ್ದಾರೆ.
16 ವರ್ಷದ ಬಾಲಕಿಯನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ಮನೆಯಿಂದ ಕರೆದೊಯ್ದು ನಿರಂತರ ಅತ್ಯಾಚಾರ ಮಾಡಿದ್ದಾನೆ. ಕಳೆದ ಎರಡು ವರ್ಷದ ಹಿಂದೆ ಪರಿಚಯವಾಗಿದ್ದ ಈತ, ನಿರಂತರ ಸಂಪರ್ಕದಲ್ಲಿದ್ದು ಆಗಾಗ ದೈಹಿಕ ಕಿರುಕುಳ ಕೊಟ್ಟಿದ್ದ ಎಂದು ಯುವತಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ವಿವರಿಸಿದ್ದಾರೆ.