ETV Bharat / state

ಗಂಗಾವತಿ: ನೂತನ ಕಿಷ್ಕಿಂಧಾ ಜಿಲ್ಲೆಗೆ ಆಗ್ರಹಿಸಿ ಸಿಎಂ ಸಿದ್ದರಾಮಯ್ಯಗೆ ಮನವಿ

author img

By ETV Bharat Karnataka Team

Published : Nov 3, 2023, 10:11 PM IST

ಹೊಸ ಕಿಷ್ಕಿಂಧಾ ಜಿಲ್ಲೆ ರಚಿಸಬೇಕೆಂದು ಒತ್ತಾಯಿಸಿ ಸಿಎಂ ಸಿದ್ದರಾಮಯ್ಯಗೆ ಕಿಷ್ಕಿಂಧಾ ಜಿಲ್ಲಾ ಹೋರಾಟ ಸಮಿತಿಯ ಸಂಚಾಲಕರು ಮನವಿ ಸಲ್ಲಿಸಿದ್ದಾರೆ.

request-to-cm-siddaramaiah-for-create-new-kishkindha-district
ಗಂಗಾವತಿ: ಕಿಷ್ಕಿಂಧಾ ಜಿಲ್ಲೆ ರಚನೆಗೊತ್ತಾಯಿಸಿ ಸಿಎಂ ಸಿದ್ದರಾಮಯ್ಯಗೆ ಮನವಿ

ಗಂಗಾವತಿ(ಕೊಪ್ಪಳ): ವಾಣಿಜ್ಯ ನಗರಿ ಗಂಗಾವತಿಯನ್ನು ಕೇಂದ್ರವನ್ನಾಗಿರಿಸಿಕೊಂಡು ನೂತನ ಕಿಷ್ಕಿಂಧಾ ಜಿಲ್ಲೆ ರಚಿಸಬೇಕೆಂದು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಿಷ್ಕಿಂಧಾ ಜಿಲ್ಲಾ ಹೋರಾಟ ಸಮಿತಿಯ ಸಂಚಾಲಕರು ಮನವಿ ಸಲ್ಲಿಸಿದರು. ಹೊಸಪೇಟೆಗೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶಾಸಕ ಗವಿಯಪ್ಪ ಅವರ ನಿವಾಸದಲ್ಲಿ ಭೇಟಿಯಾದ ಜಿಲ್ಲಾ ಹೋರಾಟ ಸಮಿತಿಯ ಸಂಚಾಲಕರು, ಈ ಬಗ್ಗೆ ಮನವಿ ಸಲ್ಲಿಸಿ ನೂತನ ಜಿಲ್ಲೆಯ ಅಗತ್ಯತೆಯನ್ನು ಸಿಎಂಗೆ ಮನವರಿಕೆ ಮಾಡಿಕೊಟ್ಟರು.

ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿಯ ಸಂಚಾಲಕರಾದ ಸುರೇಶ ಸಿಂಗನಾಳ ಮತ್ತು ಸಂತೋಷ್ ಕೇಲೋಜಿ, ಗಂಗಾವತಿ ಮತ್ತು ಕೊಪ್ಪಳದ ನಡುವೆ 60 ಕಿ.ಮೀ ಅಂತರವಿದೆ. ಕಾರಟಗಿ, ಕನಕಗಿರಿ, ತಾವರಗೇರಾ ಭಾಗದ ಜನ ಜಿಲ್ಲಾ ಕೇಂದ್ರಕ್ಕೆ ಹೋಗಬೇಕಾದರೆ 80 ರಿಂದ 90 ಕಿ.ಮೀ ಪ್ರಯಾಣಿಸಬೇಕಾಗಿದೆ. ಹೀಗಾಗಿ ಜನರಿಗೆ ತ್ವರಿತ ಸೇವೆ ಕಲ್ಪಿಸುವ ಉದ್ದೇಶಕ್ಕೆ ಗಂಗಾವತಿಯನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಿದರೆ ಕಾರಟಗಿ, ಕನಕಗಿರಿ, ತಾವರಗೇರಾ ಭಾಗದ ಜನರಿಗೆ ಅನುಕೂಲವಾಗಲಿದೆ. ಅಲ್ಲದೇ ನೂತನ ಜಿಲ್ಲಾ ವ್ಯಾಪ್ತಿಯಲ್ಲಿ ಕಂಪ್ಲಿ ಮತ್ತು ಸಿಂಧನೂರು ತಾಲೂಕುಗಳನ್ನು ಒಳಗೊಂಡಂತೆ ನೂತನ ಜಿಲ್ಲೆ ರಚಿಸಬೇಕು ಎಂದು ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ವಕೀಲರಾದ ಸೈಯದ್ ಹಾಷ್ಮುದ್ದೀನ್, ಹೆಚ್.ಎಂ. ಮಂಜುನಾಥ, ನಾಗರಾಜ ಗುತ್ತೇದಾರ ಮಾತನಾಡಿ, ಈಗಾಗಲೇ ಗಂಗಾವತಿಗೆ ನ್ಯಾಯಾಲಯದಲ್ಲಿನ ಭೂ ವ್ಯಾಜ್ಯಗಳ ತ್ವರಿತ ವಿಲೇವಾರಿಗೆ ತಾತ್ಕಾಲಿಕ ಸಹಾಯಕ ಆಯುಕ್ತರ ಕಚೇರಿ ಮಂಜೂರಾಗಿದೆ. ಮುಂಬರುವ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಈ ಬಗ್ಗೆ ಚರ್ಚಿಸಿ ಗಂಗಾವತಿಗೆ ಪೂರ್ಣ ಪ್ರಮಾಣದ ಸಹಾಯಕ ಆಯುಕ್ತ ಕಚೇರಿ ಮಂಜೂರು ಮಾಡಿಸಬೇಕು. ಇದರಿಂದ ಜನರಿಗೆ ಅನುಕೂಲವಾಗಲಿದೆ ಎಂದು ಸಿಎಂ ಬಳಿ ಮನವಿ ಮಾಡಿದರು.

ಜಿಲ್ಲಾ ಹೋರಾಟ ಸಮಿತಿ ಸದಸ್ಯರ ಮನವಿಯನ್ನು ಸಮಾಧಾನದಿಂದಲೇ ಆಲಿಸಿದ ಸಿಎಂ ಸಿದ್ದರಾಮಯ್ಯ, ಈ ಬಗ್ಗೆ ಪರಿಶೀಲಿಸುವುದಾಗಿ ಭರವಸೆ ನೀಡಿದರು. ಅಲ್ಲದೇ ಸಮಿತಿಯ ಪದಾಧಿಕಾರಿಗಳಿಂದ ಮನವಿ ಸ್ವೀಕರಸಿದರು. ಸಚಿವರಾದ ಜಮೀರ್ ಅಹ್ಮದ್, ಬೈರತಿ ಸುರೇಶ್​, ವಿ.ಎಸ್. ಉಗ್ರಪ್ಪ, ಶಾಸಕ ಹೆಚ್.ಆರ್. ಗವಿಯಪ್ಪ ಉಸ್ಥಿತರಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಹೋರಾಟ ಸಮಿತಿಯ ಪ್ರಮುಖರಾದ ವಿಶ್ವನಾಥ ಮಾಲಿಪಾಟೀಲ್, ಶ್ರೀನಿವಾಸ ಎಂ.ಜೆ, ಮಂಜುನಾಥ ಕಟ್ಟಿಮನಿ, ವಿನಯ್ ಪಾಟೀಲ್, ರಾಜು ಮುದ್ಗಲ್, ಗೌತಮ ಸಿರಿಗೇರಿ, ಉದ್ಯಮಿ ಸಂದೀಪ್ ಶಿಂಧೆ ಇದ್ದರು.

ಇದನ್ನೂ ಓದಿ: ಹೋರಾಟ - ತ್ಯಾಗ - ಬಲಿದಾನಗಳಿಂದ ಕನ್ನಡ ನಾಡು ಉದಯವಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು ದಕ್ಷಿಣ ಜಿಲ್ಲೆಗೆ ಚಿಂತನೆ: ಇತ್ತೀಚಿಗೆ, ಡಿಸಿಎಂ ಡಿ.ಕೆ.ಶಿವಕುಮಾರ್​ ಅವರು "ಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ ತಾಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಚಿಂತನೆ ನಡೆಸಲಾಗಿದೆ" ಎಂದು ತಿಳಿಸಿದ್ದರು. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿದ್ದ ಅವರು, "ಬೆಂಗಳೂರು ನಗರದ ಅಂತಾರಾಷ್ಟ್ರೀಯ ಖ್ಯಾತಿ, ಸಾರ್ವಭೌಮತೆ ಮತ್ತು ಘನತೆ ರಾಮನಗರ, ಮಾಗಡಿ, ಕನಕಪುರ ಹಾಗೂ ಚನ್ನಪಟ್ಟಣ ತಾಲೂಕುಗಳಿಗೆ ಲಭ್ಯ ಆಗಬೇಕು ಎಂಬುದು ಜನರ ಆಶಯ ಮತ್ತು ನನ್ನ ಚಿಂತನೆಯೂ ಕೂಡ" ಎಂದು ಹೇಳಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.