ಗಂಗಾವತಿ(ಕೊಪ್ಪಳ): ಕೆರೆಯಲ್ಲಿ ಮುಳುಗಿ ಸಾವು-ಬದುಕಿನ ಮಧ್ಯೆ ಒದ್ದಾಡುತ್ತಿದ್ದ ಮಗನಿಗೆ ಸಕಾಲಕ್ಕೆ ಚಿಕಿತ್ಸೆ ಸಿಕ್ಕಿಲ್ಲ ಎಂದು ಆರೋಪಿಸಿ ದಾಂಧಲೆ ಮಾಡಿ ಭೀತಿ ಹುಟ್ಟಿಸಿದ್ದ ಘಟನೆಗೆ ಸಂಬಂಧಿಸಿದಂತೆ 200ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
ಕನಕಗಿರಿ ಸರ್ಕಾರಿ ಆಸ್ಪತ್ರೆಯ ಮೇಲೆ ದಾಳಿ ಮಾಡಿದ್ದ ಜನರು ದಾಂಧಲೆ ಸೃಷ್ಟಿಸಿ ಸರ್ಕಾರಿ ಆಸ್ತಿಪಾಸ್ತಿಗೆ ಹಾನಿ ಮಾಡಿದ್ದಾರೆ ಎಂದು ಆಸ್ಪತ್ರೆಯ ವೈದ್ಯಾಧಿಕಾರಿ ಟಿ. ರಾಘವೇಂದ್ರ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಓದಿ: ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಬಾಬೂ ಜಗಜೀವನ ರಾಂ ಜಯಂತಿ ಕಾರ್ಯಕ್ರಮದಲ್ಲಿ ಗದ್ದಲ : ಸಿಎಂ ಮುಂದೆಯೇ ಆಕ್ರೋಶ