ಕೊಪ್ಪಳ: ಚುನಾವಣೆ ಪ್ರಚಾರದಲ್ಲಿ ಮಕ್ಕಳನ್ನು ಬಳಕೆ ಮಾಡಿಕೊಳ್ಳಬಾರದು ಎಂಬ ನಿಯಮವಿದೆ. ಆದರೆ, ಕೊಪ್ಪಳದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಮಕ್ಕಳನ್ನು ಬಳಕೆ ಮಾಡಿಕೊಳ್ಳುವ ಮೂಲಕ ನಿಯಮವನ್ನು ಉಲ್ಲಂಘಿಸಲಾಗಿದೆ.
ಚುನಾವಣೆ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಮುಖಂಡರು ಬಾಲಕನನ್ನು ಮಾತನಾಡಿಸಿ, ತಮ್ಮ ಪಕ್ಷದ ಪ್ರಚಾರ ಮಾಡಿಸಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣ ಫೇಸ್‍ಬುಕ್‍ನಲ್ಲಿ ಅಪ್‍ಲೋಡ್ ಮಾಡಿದ್ದಾರೆ. ಕಾಂಗ್ರೆಸ್ ಮುಖಂಡರಾದ ಹನುಮಂತಪ್ಪ ಜಲವರ್ಧಿನಿ, ರವೀಂದ್ರಗೌಡ ಮಾಲಿಪಾಟೀಲ್ ಎಂಬುವವರು ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ.
![koppal congress capmaign](https://etvbharatimages.akamaized.net/etvbharat/images/kn_kpl_01a_050419_ullanghane_photo_7202284_0504digital_00226_807.jpg)
ನಿನ್ನೆ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ರೋಡ್ ಶೋ ಇತ್ತು. ಈ ರೋಡ್‍ಶೋ ನಲ್ಲಿ ಬಾಲಕನೊಬ್ಬ ಪಾಲ್ಗೊಂಡಿದ್ದ. ಆಗ ಈ ಇಬ್ಬರು ಮುಖಂಡರು ಕಾಂಗ್ರೆಸ್ ಪಕ್ಷದ ಬಗ್ಗೆ ಬಾಲಕನಿಂದ ಪ್ರಚಾರ ಮಾಡಿಸಿದ್ದಾರೆ. ಇದನ್ನು ವಿಡಿಯೋ ಮಾಡಿ ಮುಖಂಡ ರವೀಂದ್ರಗೌಡ ಅವರು ಸಾಮಾಜಿಕ ಜಾಲತಾಣ ಫೇಸ್‍ಬುಕ್‍ನಲ್ಲಿ ಅಪ್‍ಲೋಡ್ ಮಾಡಿದ್ದಾರೆ. ಚುನಾವಣೆ ಪ್ರಚಾರಕ್ಕೆ ಮಕ್ಕಳನ್ನು ಬಳಕೆ ಮಾಡಿಕೊಳ್ಳಬಾರದು ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ಪಷ್ಟವಾಗಿ ಆದೇಶ ಮಾಡಿದೆ. ಈ ಆದೇಶವನ್ನು ಮೀರಿ ಮಕ್ಕಳನ್ನು ಚುನಾವಣೆ ಪ್ರಚಾರಕ್ಕೆ ಬಳಕೆ ಮಾಡಿಕೊಳ್ಳುತ್ತಿರೋದಕ್ಕೆ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿವೆ.