ಗಂಗಾವತಿ: ತಾಲೂಕಿನ ರಾಂಪೂರ, ಆನೆಗೊಂದಿ ಮತ್ತು ಮಲ್ಲಾಪುರ ಭಾಗದಲ್ಲಿ ನಡೆಯುತ್ತಿರುವ ವಿಜಯನಗರದ ಉಪ ಕಾಲುವೆಗಳ ಅಧುನೀಕರಣ ಕಾಮಗಾರಿಗೆ ಅಪಾರ ಪ್ರಮಾಣದ ಮೊರಂ ಅನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆಯೆನ್ನುವ ಆರೋಪ ಕೇಳಿಬಂದಿದೆ.
ತಾಲೂಕಿನ ಮಲ್ಲಾಪುರ ಗ್ರಾಮದ ಹೊರವಲಯದಲ್ಲಿ ಎರೆಬಿಂಚಿಗುಡ್ಡದ ಪ್ರದೇಶದಲ್ಲಿ ಕೃಷಿ ಉದ್ದೇಶಕ್ಕೆ ಮೀಸಲಾಗಿಟ್ಟಿದ್ದ ವ್ಯಕ್ತಿಯೊಬ್ಬರ ಪಟ್ಟಾ ಜಮೀನಿನ ಮೂಲಕ ಅಪಾರ ಪ್ರಮಾಣದ ಮೊರಂ ಅನ್ನು ರಾತ್ರೋರಾತ್ರಿ ಸಾಗಿಸಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಸಂಬಂಧಿತ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದಾಗಲಿ, ಕಂದಾಯ ಇಲಾಖೆಯಿಂದಾಗಲಿ ಪರವಾನಿಗೆ ಪಡೆದುಕೊಂಡಿಲ್ಲ. ಈ ಬಗ್ಗೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯ ಯುವಕ ಬಸವರಾಜ ಮಲ್ಲಾಪುರ ದೂರಿದ್ದಾರೆ.
ಇದನ್ನೂ ಓದಿ: ಸಿಸಿಐ ತನಿಖೆ ಪ್ರಶ್ನಿಸಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ ಫ್ಲಿಪ್ ಕಾರ್ಟ್, ಅಮೆಜಾನ್