ಕೊಪ್ಪಳ: ಕೊರೊನಾ ವೈರಸ್ ಭೀತಿ ಹಿನ್ನಲೆಯಲ್ಲಿ ಇಡೀ ಭಾರತ ಲಾಕ್ ಡೌನ್ ಆಗಿದೆ.
ಕೊರೊನಾ ವಿರುದ್ಧ ಹೋರಾಡಲು ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ಸಂಸದ ಸಂಗಣ್ಣ ಕರಡಿ ಅವರು ಸಂಸದರ ಅನುದಾನದಲ್ಲಿ 1 ಕೋಟಿ ರುಪಾಯಿ ನೀಡುವ ಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು.
![sanganna karadi to give 1 crore to pm relief fund](https://etvbharatimages.akamaized.net/etvbharat/prod-images/kn-kpl-04-30-mpletter-to-dc-photo-7202284_30032020151119_3003f_1585561279_338.jpg)
ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಿಂದ ಒಂದು ಕೋಟಿ ರುಪಾಯಿ ನೀಡುವ ಒಪ್ಪಿಗೆ ಪತ್ರವನ್ನು ಸಂಸದ ಸಂಗಣ್ಣ ಕರಡಿ ಅವರು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ್ ಅವರಿಗೆ ಸಲ್ಲಿಸಿದರು.