ಕೊಪ್ಪಳ: ರಾಜ್ಯ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಆಪ್ತ ಜಿಲ್ಲೆಯ ಬಿಜೆಪಿ ಮುಖಂಡ ಶರಣು ತಳ್ಳಿಕೇರಿಯನ್ನು ನೇಮಕ ಮಾಡಲಾಗಿದೆ.
![dsd](https://etvbharatimages.akamaized.net/etvbharat/prod-images/9657123_t.jpg)
ಕುಷ್ಟಗಿ ತಾಲೂಕಿನ ಹನುಮನಾಳ ಗ್ರಾಮದ ಶರಣು ತಳ್ಳಿಕೇರಿ ಇತ್ತೀಚೆಗೆ ನಡೆದ ಶಿರಾ ಉಪಚುನಾವಣೆಯಲ್ಲಿ ಬಿ.ವೈ. ವಿಜಯೇಂದ್ರ ಟೀಂ ಜೊತೆ ಕೆಲಸ ಮಾಡಿದ್ದರು. ಈ ಹಿನ್ನೆಲೆ ಶರಣು ತಳ್ಳಿಕೇರಿಗೆ ಸರ್ಕಾರ ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಉಡುಗೊರೆ ನೀಡಿದೆ.
ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷನಾಗಿ, ಕುಷ್ಟಗಿ ತಾ.ಪಂ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿರುವ ಶರಣು ತಳ್ಳಿಕೇರಿಗೆ ಸಣ್ಣ ವಯಸ್ಸಿನಲ್ಲಿಯೇ ದೊಡ್ಡ ನಿಗಮ ಮಂಡಳಿಯ ಹುದ್ದೆ ದೊರಕಿದಂತಾಗಿದೆ.