ಕೊಪ್ಪಳ : ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗಳಿಗೆ ರಾಜ್ಯಾದ್ಯಂತ ಭಾನುವಾರ ನೇಮಕಾತಿ ಪರೀಕ್ಷೆ ನಡೆಯಿತು. ಕೊಪ್ಪಳದಲ್ಲಿ ಪರೀಕ್ಷೆ ಬರೆಯಲು ಫುಲ್ ತೋಳಿನ ಶಟ್೯ ಧರಿಸಿ ಬಂದವರಿಗೆ ಪರೀಕ್ಷಾ ಸಿಬ್ಬಂದಿ ಶರ್ಟ್ ತೋಳು ಕತ್ತರಿಸುವಂತೆ ಸೂಚಿಸಿದ ಘಟನೆ ಜರುಗಿದೆ. ಇಂತಹದೊಂದು ವಿಚಿತ್ರ ಸಂಗತಿ ಕೊಪ್ಪಳ ತಾಲೂಕಿನ ಭಾಗ್ಯನಗರದ ನವಚೇತನ ಪಬ್ಲಿಕ್ ಶಾಲೆ ಕೇಂದ್ರದಲ್ಲಿ ನಡೆದಿದೆ.
ಇತ್ತೀಚೆಗೆ ನಡೆದ ಕೆಲವು ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ಜರುಗಿರುವುದು ಸಾಬೀತಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಕಟ್ಟುನಿಟ್ಟಿನ ನಿಯಮ ಜಾರಿಮಾಡಿದೆ. ಈ ಹಿನ್ನೆಲೆಯಲ್ಲಿ ನಡೆಯುತ್ತಿರುವ ಪರೀಕ್ಷೆಗೆ ತುಂಬು ತೋಳಿನ ಶರ್ಟ್ ಧರಿಸಿ ಬಂದವರನ್ನು ಪರೀಕ್ಷಾ ಕೇಂದ್ರದ ಒಳಗೆ ಸೇರಿಸಲು ನಿರಾಕರಿಸಲಾಗಿದೆ. ಅಲ್ಲದೆ, ಬೇರೆ ಶರ್ಟ್ ಧರಿಸಿ ಬರುವಂತೆ ಸೂಚಿಸಲಾಗಿದೆ.
ಹೀಗಾಗಿ ಕೆಲವರು ಅನಿವಾರ್ಯವಾಗಿ ತುಂಬು ತೋಳುಗಳನ್ನೇ ಕತ್ತರಿಸಿಕೊಂಡು ಪರೀಕ್ಷೆಗೆ ಹಾಜರಾಗಿದ್ದಾರೆ.
ಇದನ್ನೂ ಓದಿ : ಪೂರ್ವ ಸಿದ್ಧತಾ ಹಂತದಲ್ಲಿ ಸಬ್-ಅರ್ಬನ್ ರೈಲು ಕಾಮಗಾರಿ: ಮೋದಿ ಅಡಿಪಾಯ ಹಾಕಿದ್ರೂ ಮುಟ್ಟದ ಚುರುಕು