ಗಂಗಾವತಿ: ದ್ವಿತೀಯ ಪಿಯುಸಿ ಕೊನೆಯ ಪರೀಕ್ಷೆಗೆ ಆರೋಗ್ಯ ಮತ್ತು ಶಿಕ್ಷಣ ಇಲಾಖೆಯ ಸಿಬ್ಬಂದಿ ಸಾಕಷ್ಟು ಮುಂಜಾಗ್ರತೆ ವಹಿಸಿದ್ದು, ಪರೀಕ್ಷಾರ್ಥಿಗಳ ದೈಹಿಕ ಉಷ್ಣಾಂಶ ಪರೀಕ್ಷೆ ಮತ್ತು ಕೈಗಳಿಗೆ ಸ್ಯಾನಿಟೈಸ್ ಕಡ್ಡಾಯವಾಗಿ ಮಾಡಲಾಗಿದೆ.
ಇಲ್ಲಿನ ಸರ್ಕಾರಿ ಜೂನಿಯರ್ ಕಾಲೇಜು, ಎಂಎನ್ಎಂ ಬಾಲಕಿಯರ ಪಿಯು ಕಾಲೇಜು, ಕೊಟ್ಟೂರೇಶ್ವರ ಹಾಗೂ ಸರೋಜಮ್ಮ ಪಿಯು ಕಾಲೇಜುಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಸುಮಾರು ಮೂರೂವರೆ ಸಾವಿರ ಮಕ್ಕಳು ಪರೀಕ್ಷೆಗೆ ಹಾಜರಾಗಿದ್ದಾರೆ.
ವಿದ್ಯಾರ್ಥಿಗಳು ಮಾಸ್ಕ್ ಧರಿಸಿಯೇ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ್ದಾರೆ. ಕೇಂದ್ರದ ಪ್ರವೇಶ ದ್ವಾರದ ಮುಂದೆ ಪ್ರತಿ ವಿದ್ಯಾರ್ಥಿಯನ್ನು ತಪಾಸಣೆಗೊಳಪಡಿಸಿ ಒಳ ಬಿಡಲಾಗುತ್ತಿದೆ.