ETV Bharat / state

ಕಿನ್ನಾಳ ಗ್ರಾಮದಲ್ಲಿ 80 ಕೊರೊನಾ ಕೇಸು ಪತ್ತೆ: ನಿಷೇಧಾಜ್ಞೆ ಜಾರಿ, ಮಣ್ಣಿನ ಗುಡ್ಡೆ ಹಾಕಿ ರಸ್ತೆ ಮುಚ್ಚಿದ ಅಧಿಕಾರಿಗಳು! - rising of Covid

ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ ಉಪವಿಭಾಗಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಅವರು 144 ಸೆಕ್ಷನ್​ ಜಾರಿಗೊಳಿಸಿದ್ದಾರೆ.

kinnala-village
ನಿಷೇಧಾಜ್ಞೆ ಜಾರಿಗೊಳಿಸಿದ ಎಸಿ
author img

By

Published : Apr 27, 2021, 7:07 AM IST

Updated : Apr 27, 2021, 1:42 PM IST

ಕೊಪ್ಪಳ: ತಾಲೂಕಿನ ಕಿನ್ನಾಳ ಗ್ರಾಮದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಉಪವಿಭಾಗಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಅವರು ಗ್ರಾಮಾದ್ಯಂತ ಕಲಂ 144ರನ್ವಯ ನಿಷೇಧಾಜ್ಞೆ ಹೊರಡಿಸಿದ್ದಾರೆ‌. ಈ ಮೂಲಕ ಗ್ರಾಮದಲ್ಲಿ ಅಗತ್ಯ ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಚಟುವಟಿಕೆಗಳಿಗೆ ಇಂದಿನಿಂದ ಏಪ್ರಿಲ್ 30ರವರೆಗೆ ನಿರ್ಬಂಧ ಹೇರಲಾಗಿದೆ.

ನಿಷೇಧಾಜ್ಞೆ ಜಾರಿ, ಮಣ್ಣಿನ ಗುಡ್ಡೆ ಹಾಕಿ ರಸ್ತೆ ಮುಚ್ಚಿದ ಅಧಿಕಾರಿಗಳು

ಗ್ರಾಮದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, 80 ಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಸೋಂಕು‌ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರದತ್ತ ಅಧಿಕಾರ ಬಳಸಿ ಕಲಂ 144 ರನ್ವಯ ಗ್ರಾಮದಲ್ಲಿ ಏ. 26 ರಿಂದ 30ರವರೆಗೆ‌ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ನಿಯಮದ ಪ್ರಕಾರ, ನಾಲ್ಕಕ್ಕಿಂತ ಹೆಚ್ಚು ಜನರು ಗುಂಪಾಗಿ ಸೇರುವಂತಿಲ್ಲ. ಬೆಳಗ್ಗೆ 10 ಗಂಟೆಯೊಳಗಾಗಿ ಅಗತ್ಯ ವಸ್ತುಗಳನ್ನು ತೆಗೆದುಕೊಳ್ಳಬೇಕು. ಬೇರೆ ಗ್ರಾಮದ ಜನರನ್ನು ಕೃಷಿ ಚಟುವಟಿಕೆಗಳಿಗೆ ಹಾಗೂ ಇತರೆ ಚಟುವಟಿಕೆಗಳಿಗೆ ಕರೆತರಬಾರದು. ಮದುವೆ ಸೇರಿದಂತೆ ಇನ್ನಿತರೆ ಕಾರ್ಯಕ್ರಮಗಳಿಗೆ ಈಗಾಗಲೇ ನಿಗದಿ ಪಡಿಸಿದ ಜನರ ಸಂಖ್ಯೆ ಹಾಗೂ ಕಡ್ಡಾಯವಾಗಿ ಪರವಾನಿಗೆ ಪಡೆದುಕೊಳ್ಳಬೇಕು ಎಂದು ಉಪವಿಭಾಗಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

kinnala-village
ನಿಷೇಧಾಜ್ಞೆ ಜಾರಿಗೊಳಿಸಿದ ಎಸಿ

ಅಷ್ಟೇ ಅಲ್ಲದೇ ಕೊರೊನಾ ಉಲ್ಬಣಗೊಂಡಿರುವ ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮದಲ್ಲಿ ಅಧಿಕಾರಿಗಳು ಬಿಗಿ ಕ್ರಮ ಕೈಗೊಂಡಿದ್ದಾರೆ. ಅಧಿಕಾರಿಗಳು ಗ್ರಾಮದ ಸುತ್ತ-ಮುತ್ತಲಿನ ರಸ್ತೆಗಳ ಮೇಲೆ ಮಣ್ಣಿನ ಗುಡ್ಡೆ ಹಾಕಿ ಬಂದ್ ಮಾಡಿದ್ದಾರೆ. ಕಿನ್ನಾಳ ಗ್ರಾಮದಲ್ಲಿ 80 ಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆ ಸೋಂಕು ಹರಡುವಿಕೆ ನಿಯಂತ್ರಿಸಲು ಉಪವಿಭಾಗಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಅವರು 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಹೀಗಾಗಿ ಗ್ರಾಮದಲ್ಲಿ ಬಿಗಿ ಕ್ರಮ ಕೈಗೊಳ್ಳಲಾಗಿದೆ. ಜನರ ಓಡಾಟ, ವಾಹನಗಳ ಓಡಾಟ ಹಾಗೂ ಬೇರೆ ಗ್ರಾಮಗಳಿಂದ ಜನರು ಬರದಂತೆ ಗ್ರಾಮದ ಸುತ್ತ-ಮುತ್ತಲಿನ ರಸ್ತೆಗಳು ಸೇರಿ ಪ್ರಮುಖ ರಸ್ತೆಗಳಲ್ಲಿ ಮಣ್ಣಿನ ಗುಡ್ಡೆ ಹಾಕಿ ಬಂದ್ ಮಾಡಿದ್ದಾರೆ.

Last Updated : Apr 27, 2021, 1:42 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.