ಕೊಪ್ಪಳ : ಮಾಜಿ ಸಚಿವ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ ಅವರಿಗೆ ಕೊರೊನಾ ಸೋಂಕು ತಗುಲಿರುವುದ ದೃಢಪಟ್ಟಿದ್ದು, ಹೋಮ್ ಐಸೋಲೇಷನ್ಲ್ಲಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಕಳೆದ ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದೆ.
ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ದೃಢಪಟ್ಟಿದೆ. ಸಂಪರ್ಕದಲ್ಲಿದ್ದವರು ಪರೀಕ್ಷೆಗೊಳಗಾಗುವಂತೆ ಮನವಿ ಮಾಡಿದ್ದಾರೆ.
ಸದ್ಯ ಮಾಜಿ ಸಚಿವರು ಜಿಲ್ಲೆಯ ಕಾರಟಗಿಯಲ್ಲಿರುವ ತಮ್ಮ ನಿವಾಸದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.