ETV Bharat / state

ಹಿಂದೂ ಕಾರ್ಯಕರ್ತರ ಕೊಲೆ ಮಾಡಿಸಿದ್ದು ಬಿಜೆಪಿ: ಶಿವರಾಜ ತಂಗಡಗಿ ನೇರ ಆರೋಪ - ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಜಿಲ್ಲೆಯಲ್ಲಿ 70 ಸಾವಿರಕ್ಕೂ ಹೆಚ್ಚು ಮತಗಳನ್ನು ಡಿಲೀಟ್ ಮಾಡಲಾಗಿದೆ. ಈ ಬಗ್ಗೆ ಇನ್ನೆರಡು ದಿನಗಳಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಗುವುದು.

shivraj-tangadagi-direct-accusation-against-bjp
ಹಿಂದೂ ಕಾರ್ಯಕರ್ತರ ಕೊಲೆ ಮಾಡಿಸಿದ್ದು ಬಿಜೆಪಿ: ಶಿವರಾಜ ತಂಗಡಗಿ ನೇರ ಆರೋಪ
author img

By

Published : Dec 3, 2022, 4:59 PM IST

Updated : Dec 3, 2022, 7:19 PM IST

ಕೊಪ್ಪಳ: ಹಿಂದೂ ಕಾರ್ಯಕರ್ತರ ಕೊಲೆಗೆ ನೇರ ಹೊಣೆ ಬಿಜೆಪಿಗರೇ. ಅವರೇ ಮುಂದೆ ನಿಂತು ಕೊಲೆ ಮಾಡಿಸುತ್ತಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ಮಾಜಿ ಸಚಿವ ಶಿವರಾಜ ತಂಗಡಗಿ ಆರೋಪಿಸಿದ್ದಾರೆ.

ಡಬಲ್ ಇಂಜಿನ್ ಸರ್ಕಾರ ಯಾವುದೇ ಅಭಿವೃದ್ಧಿಯ ಬಗ್ಗೆ ಮಾತನಾಡುತ್ತಿಲ್ಲ. ಬದಲಾಗಿ ಜಾತಿ, ಧರ್ಮದ ಹೆಸರಿನಲ್ಲಿ ಮತ ಕೇಳಲು ಹೊರಟಿದೆ. ಹಿಂದೂ ಧರ್ಮದ ಹೆಸರು ಹೇಳಿಕೊಂಡು ರಾಜಕೀಯ ಮಾಡುತ್ತಿರುವ ಇವರು, ಹಿಂದೂ ಕಾರ್ಯಕರ್ತರ ಕೊಲೆಗೆ ಕುಮ್ಮಕ್ಕು ನೀಡುತ್ತಿದ್ದಾರೆ. ಸಿದ್ಧರಾಮಯ್ಯ ಸರ್ಕಾರ ಇರುವಾಗಲೇ ಹಿಂದೂಗಳ ಕೊಲೆಯಾಗಿವೆ ಎಂದು ಪ್ರಚಾರ ಮಾಡಿ, ಅಧಿಕಾರ ಪಡೆದುಕೊಂಡಿದ್ದೀರಿ. ಇದೀಗ ನಿಮ್ಮದೇ ಡಬಲ್ ಇಂಜಿನ್ ಸರ್ಕಾರವಿದ್ದರೂ ಶಿವಮೊಗ್ಗ, ಮಂಗಳೂರಿನಲ್ಲಿ ಯಾಕೆ ಕೊಲೆಗಳಾದವು? ಅಂದರೆ ಹಿಂದೂ ಕಾರ್ಯಕರ್ತರನ್ನು ಕೊಲೆ ಮಾಡಿಸುತ್ತಿರುವುದು ಬಿಜೆಪಿಯವರೇ ಎಂದು ನೇರವಾಗಿಯೇ ಆರೋಪಿಸಿದ್ದಾರೆ.

ಹಿಂದೂ ಕಾರ್ಯಕರ್ತರ ಕೊಲೆ ಮಾಡಿಸಿದ್ದು ಬಿಜೆಪಿ: ಶಿವರಾಜ ತಂಗಡಗಿ ನೇರ ಆರೋಪ

ಕೊಪ್ಪಳ ಜಿಲ್ಲೆಯಲ್ಲಿ 70 ಸಾವಿರಕ್ಕೂ ಹೆಚ್ಚು ಮತಗಳನ್ನು ಡಿಲೀಟ್ ಮಾಡಲಾಗಿದೆ. ಈ ಬಗ್ಗೆ ಇನ್ನೆರಡು ದಿನಗಳಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಗುವುದು. ಬಿಜೆಪಿಯವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸೋಲುವ ಭಯದಿಂದ ತಮಗೆ ಬಾರದೇ ಇರುವ ಮತದಾರರ ಹೆಸರನ್ನು ಹುಡುಕಿ ಮತಪಟ್ಟಿಯಿಂದ ಡಿಲೀಟ್ ಮಾಡುವ ಕೆಲಸದಲ್ಲಿ ನಿರತರಾಗಿದ್ದಾರೆ.

ನರೇಂದ್ರ ಮೋದಿ, ಬೊಮ್ಮಾಯಿ ಮುಖ ನೋಡಿ ಜನ ಈ ಬಾರಿ ಮತ ಹಾಕುವುದಿಲ್ಲ. ಸರ್ಕಾರ ನಡೆಸಲು ಬರದವರೆಲ್ಲ, ಧಮ್ಮು, ತಾಕತ್ತು ಬಗ್ಗೆ ಮಾತನಾಡುತ್ತಿದ್ದಾರೆ. ಈ ಬಾರಿ ಮೋದಿ ಭಾಷಣಕ್ಕೆ ಜನ ಮರುಳಾಗುವುದಿಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಪ್ರಕರಣದೊಂದಿಗೆ ಬಿಜೆಪಿ 2023ಕ್ಕೆ ಅಂತ್ಯವಾಗಲಿದೆ ಎಂದರು.

ಇದನ್ನೂ ಓದಿ: ಕಾಂಗ್ರೆಸ್​ ಸೃಷ್ಟಿಸುತ್ತಿರುವ ಆರೋಪದಲ್ಲಿ ಹುರುಳಿಲ್ಲ: ಅರುಣ್ ಸಿಂಗ್

Last Updated : Dec 3, 2022, 7:19 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.