ಕೊಪ್ಪಳ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಕೊಠಡಿಗೆ ಬೆಂಕಿ ಹೊತ್ತಿಕೊಂಡು ಉರಿದ ಘಟನೆ, ಜಿಲ್ಲೆಯ ಯಲಬುರ್ಗಾ ತಾಲೂಕಿನ ಹಿರೇ ಅರಳಿಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ.
ಶಾಲೆಯ ವಿಜ್ಞಾನ ವಿಭಾಗದ ಪ್ರಯೋಗಾಲಯದಲ್ಲಿ ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗುತ್ತಿದೆ. ಘಟನೆಯಲ್ಲಿ ಕಂಪ್ಯೂಟರ್, ಟಿವಿ ಸೇರಿದಂತೆ ಹಲವಾರು ದಾಖಲೆ ಬೆಂಕಿಗಾಹುತಿಯಾಗಿವೆ. ಅಗ್ನಿಶಾಮಕ ಸಿಬ್ಬಂದಿ ಸೇರಿದಂತೆ ಸ್ಥಳೀಯರು ಬೆಂಕಿ ನಂದಿಸಿದ್ದಾರೆ.
ಸುಮಾರು 4 ಲಕ್ಷ ರೂ.ಗಳಿಗೂ ಅಧಿಕ ಮೌಲ್ಯದ ವಸ್ತುಗಳು ಹಾಗೂ ಶಾಲಾ ದಾಖಲಾತಿಗಳು ಬೆಂಕಿಯಲ್ಲಿ ಸುಟ್ಟು ಕರುಕಲಾಗಿವೆ. ಇದು ಶಾರ್ಟ್ ಸರ್ಕ್ಯೂಟ್ ನಿಂದ ಆದ ಘಟನೆಯಾ? ಅಥವಾ ಕಿಡಿಗೇಡಿಗಳ ಕೃತ್ಯವಾ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.