ಕೊಪ್ಪಳ: ಬಿಟ್ ಕಾಯಿನ್ ಹಗರಣದ(Bitcoin scam) ಆರೋಪಿ ಶ್ರೀಕಿ ನಾಪತ್ತೆ(Shriki missing case) ಕುರಿತಂತೆ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಸಿಎಂ ಬಸವರಾಜ ಬೊಮ್ಮಾಯಿ ಸಿಡಿಮಿಡಿಗೊಂಡ (CM Basavaraj Bommai) ಘಟನೆ ನಗರದಲ್ಲಿ ನಡೆಯಿತು.
ನಗರದಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಜನಸ್ವರಾಜ್ ಸಮಾವೇಶ(jana swaraj yatra)ದಲ್ಲಿ ಪಾಲ್ಗೊಳ್ಳಲು ಸಿಎಂ ಕೊಪ್ಪಳ ತಾಲೂಕಿನ ಬಸಾಪುರ ಬಳಿಯ ಖಾಸಗಿ ಏರ್ಪೋರ್ಟ್ಗೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಜನ ಸ್ವರಾಜ್ ಯಾತ್ರೆಗಾಗಿ ಇಲ್ಲಿಗೆ ಬಂದಿದ್ದೇವೆ. ನಾಲ್ಕು ತಂಡಗಳ ಪೈಕಿ ಒಂದು ತಂಡದ ನೇತೃತ್ವದಲ್ಲಿ ನಾನು ಯಾತ್ರೆಯನ್ನು ಉದ್ಘಾಟನೆ ಮಾಡುತ್ತಿದ್ದೇನೆ ಎಂದರು.
ಮಾಧ್ಯಮದವರ ಮೇಲೆ ಸಿಎಂ ಗರಂ: ಶ್ರೀಕಿ ನಾಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಸಿಎಂ ಬೊಮ್ಮಾಯಿ ಸಿಡಿಮಿಡಿಗೊಂಡರು. ಪೊಲೀಸ್ ಇಲಾಖೆ ಇದೆ ತನಿಖೆ ಮಾಡುತ್ತಿದೆ ಎಂದು ಹೇಳಿದರು.
ಬೆಳೆ ಹಾನಿ ಸಮೀಕ್ಷೆ: ಅಕಾಲಿಕ ಮಳೆಯಿಂದ ಬೆಳೆ ಹಾನಿಯಾದ ಕುರಿತಂತೆ ನಿನ್ನೆ ಅಧಿಕಾರಿಗಳ ಜೊತೆ ಸಭೆ ಮಾಡಿದ್ದೇನೆ. ಹಾನಿ ಕುರಿತು ಸಮೀಕ್ಷೆ ನಡೆಸಿ ವರದಿ ಸಲ್ಲಿಕೆಗೆ ಸೂಚಿಸಿದ್ದೇನೆ. ವರದಿಯಾಧರಿಸಿ ಸರ್ಕಾರ ಪರಿಹಾರ ನೀಡುತ್ತದೆ. ಈಗ ವಿಧಾನ ಪರಿಷತ್ ಚುನಾವಣೆ ಇದ್ದು, ಪಕ್ಷ ಸಂಘಟನೆ ಮಾಡುತ್ತಿದ್ದೇವೆ. ಹಾಗಂತ ಸರ್ಕಾರದ ಕೆಲಸ ನಿಂತಿಲ್ಲ. ಸರ್ಕಾರದ ಕೆಲಸದ ಜೊತೆಗೆ ಪಕ್ಷದ ಕೆಲಸ ಮಾಡುತ್ತಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.