ETV Bharat / state

ಡಿಕೆಶಿಗೆ ಸಿದ್ದರಾಮಯ್ಯ ಗುದ್ದು?: ಅತ್ತ ಟಿಕೆಟ್​ಗಾಗಿ ಅರ್ಜಿ, ಇತ್ತ ಅಭ್ಯರ್ಥಿಗಳ ಘೋಷಣೆ - ಕರ್ನಾಟಕ ವಿಧಾನಸಭಾ ಚುನಾವಣೆ

ಕಾಂಗ್ರೆಸ್​ ಟಿಕೆಟ್ ಆಕಾಂಕ್ಷಿಗಳು ಅರ್ಜಿ ಸಲ್ಲಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಈಗಾಗಲೇ ಘೋಷಣೆ ಮಾಡಿದ್ದಾರೆ. ಆದರೆ ಮತ್ತೊಂದೆಡೆ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೊಪ್ಪಳ ಜಿಲ್ಲೆಯ ಕಾಂಗ್ರೆಸ್​ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡುವ ಮೂಲಕ ಟಾಂಗ್ ನೀಡಿದ್ದಾರೆ.

siddaramaiah
ಸಿದ್ದರಾಮಯ್ಯ
author img

By

Published : Nov 21, 2022, 6:45 AM IST

ಕೊಪ್ಪಳ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು​ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದ್ದಾರೆ. ಆದರೆ, ಕೊಪ್ಪಳದಲ್ಲಿ ನಿನ್ನೆ ನಡೆದ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಜಿಲ್ಲೆಯ ಐವರು ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಮೂಲಕ ಡಿಕೆಶಿಗೆ ಟಾಂಗ್ ಕೊಟ್ಟರು.

ಕೊಪ್ಪಳದಲ್ಲಿ ಅಭ್ಯರ್ಥಿಗಳ ಘೋಷಣೆ ಮಾಡಿದ ಸಿದ್ದರಾಮಯ್ಯ

ಖಾಸಗಿ ಕಾರ್ಯಕ್ರಮದಲ್ಲಿ ಥೇಟ್ ರಾಜಕೀಯ ಭಾಷಣ ಮಾಡಿದ ಸಿದ್ದರಾಮಯ್ಯ ತಮ್ಮ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿರುವುದು ಚರ್ಚೆ ಹುಟ್ಟುಹಾಕಿದೆ. ಅಷ್ಟೇ ಏಕೆ?, ಕೊಪ್ಪಳದ ಒಣಬಳ್ಳಾರಿಯಲ್ಲಿ ಜರುಗಿದ ಖಾಸಗಿ ಕಾರ್ಯಕ್ರಮದಲ್ಲಿ 5 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ಕಾಂಗ್ರೆಸ್ ಪ್ರಭಾವಿ ನಾಯಕರ ಬ್ಯಾನರ್‌ಗಳನ್ನೂ ಹಾಕಲಾಗಿತ್ತು. ಆದರೆ, ಡಿ ಕೆ ಶಿವಕುಮಾರ್​ ಫೋಟೋ ಮಾತ್ರ ಎಲ್ಲೂ ಕಾಣಲಿಲ್ಲ.

ಇದನ್ನೂ ಓದಿ: ನೀವೆಲ್ಲಾ ಆಶೀರ್ವದಿಸಿ ಗೆಲ್ಲಿಸಬೇಕು.. ಮದುವೆ ವೇದಿಕೆಯಲ್ಲೂ ಸಿದ್ದರಾಮಯ್ಯ ರಾಜಕೀಯ ಭಾಷಣ

ಇಲ್ಲಿ ನಡೆದದ್ದು ಕಾಂಗ್ರೆಸ್ ಕಾರ್ಯಕ್ರಮವಲ್ಲದಿದ್ದರೂ ಖಾಸಗಿ ಕಾರ್ಯಕ್ರಮದ ನೆಪದಲ್ಲಿ ಸಿದ್ದರಾಮಯ್ಯ ತಮ್ಮ ಬೆಂಬಲಿಗ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಿ, ವೇದಿಕೆ ಸದ್ಬಳಕೆ ಮಾಡಿಕೊಂಡರು. ಆ ಮೂಲಕ ತಮ್ಮ ಬೆಂಬಲಿಗರಿಗೆ ಟಿಕೆಟ್ ಫಿಕ್ಸ್ ಎಂಬ ಸಂದೇಶ ರವಾನಿಸಿದ್ದಾರೆ. ಈ ಬೆಳವಣಿಗೆ ಇತರೆ ಟಿಕೆಟ್​ ಆಕಾಂಕ್ಷಿಗಳಿಗೆ ಬೇಸರ ಉಂಟುಮಾಡಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.