ETV Bharat / state

ಸತತ ಹಾಜರಿ: ಶಾಸಕ ಜನಾರ್ದನ ರೆಡ್ಡಿಗೆ ಉಡುಗೊರೆಯ ಮೂಲಕ‌ ಸ್ಪೀಕರ್​ ಅಭಿನಂದನೆ - ಗಂಗಾವತಿಯ ಶಾಸಕ ಜಿ ಜನಾರ್ದನ

Speaker Khader gift to MLA Janardhana Reddy: ಕಳೆದ ವಿಧಾನಸಭೆ ಅಧಿವೇಶನದ ಕಲಾಪದಲ್ಲಿ ಒಂದು ದಿನವೂ ಗೈರಾಗದೇ ಗಮನ ಸೆಳೆದಿದ್ದ ಗಂಗಾವತಿಯ ಶಾಸಕ ಜಿ. ಜನಾರ್ದನ ರೆಡ್ಡಿಗೆ ಸ್ಪೀಕರ್ ಯು.ಟಿ. ಖಾದರ್ ಅಭಿನಂದಿಸಿದ್ದಾರೆ.

Speaker gift to Janardhana Reddy
ಜನಾರ್ದನ ರೆಡ್ಡಿಗೆ ಸ್ಪೀಕರ್ ಉಡುಗೊರೆ
author img

By ETV Bharat Karnataka Team

Published : Dec 8, 2023, 11:34 AM IST

ಗಂಗಾವತಿ: ಕಳೆದ ವಿಧಾನಸಭೆಯ ಅಧಿವೇಶನದ ಕಲಾಪದ ಒಂದು ದಿನವೂ ಗೈರಾಗದೇ ಗಮನ ಸೆಳೆದಿದ್ದ ಗಂಗಾವತಿಯ ಶಾಸಕ ಜಿ. ಜನಾರ್ದನ ರೆಡ್ಡಿಗೆ ಸ್ಪೀಕರ್ ಯು.ಟಿ. ಖಾದರ್ ಉಡುಗೊರೆ ನೀಡುವ ಮೂಲಕ ಅಭಿನಂದಿಸಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದ ಬಿಡುವಿನ ಸಂದರ್ಭದಲ್ಲಿ ತಮ್ಮ ಕೊಠಡಿಗೆ ಕರೆಯಿಸಿಕೊಂಡ ಸ್ಪೀಕರ್ ಪುಟ್ಟ ಉಡುಗೊರೆ ನೀಡಿ ಅಭಿನಂದನೆ ಸಲ್ಲಿಸಿದರು.

ವಿಧಾನಸೌಧದಲ್ಲಿ ನಡೆದ ಕಳೆದ ಅಧಿವೇಶನದ 14 ದಿನಗಳ ಎಲ್ಲ ಕಾರ್ಯಕಲಾಪದಲ್ಲಿ ಸಮಯಕ್ಕೆ ಸರಿಯಾಗಿ ಹಾಜರಾಗಿ ದಿನದ ಕಲಾಪಗಳು ಮುಗಿಯುವವರೆಗೂ ಇದ್ದು ರೆಡ್ಡಿ ಗಮನ ಸೆಳೆದಿದ್ದರು. ಈ ಹಿನ್ನೆಲೆ ಅಭಿನಂದಿಸಿದ ಖಾದರ್ ಚುನಾಯಿತ ಪ್ರತಿನಿಧಿಗಳಿಗೆ ಕೇವಲ ತಮ್ಮ ಕ್ಷೇತ್ರದ ಬಗ್ಗೆ ಮಾತ್ರವಲ್ಲ ಇಡೀ ರಾಜ್ಯದಲ್ಲಿ ನಡೆಯುವ ಕಾರ್ಯಚಟುವಟಿಕೆಗಳ ಬಗ್ಗೆಯೂ ಗಮನ ಇರಬೇಕು. ಈ ನಿಟ್ಟಿನಲ್ಲಿ ಕಲಾಪದಲ್ಲಿನ ಚಟುವಟಿಕೆಗಳಲ್ಲಿ ಭಾಗಿಯಾಗುವ ನಿಮ್ಮ ಹಾಜರಾತಿಯ ನಡಾವಳಿಕೆ ಇತರರಿಗೆ ಮಾದರಿಯಾಗಿದೆ ಎಂದು ಸ್ಪೀಕರ್ ಅಭಿನಂದಿಸಿದ್ದಾರೆ ಎಂದು ರೆಡ್ಡಿ ತಿಳಿಸಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ನೂತನ ಪಕ್ಷ ಕಟ್ಟಿ ಗಂಗಾವತಿ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ ಜನಾರ್ದನ ರೆಡ್ಡಿ, ಸದನದ ಪ್ರತಿ ಕಲಾಪದಲ್ಲಿ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಪ್ರಶ್ನೆ ಎತ್ತುವ ಮೂಲಕ ಜನರ ಗಮನ ಸೆಳೆಯುತ್ತಿದ್ದಾರೆ.

ಸಕಾಲಕ್ಕೆ ಕಲಾಪಕ್ಕೆ ಬರುವವರಿಗೆ ಟೀ ಕಪ್ ಸಾಸರ್ ಗಿಫ್ಟ್: ಈ ಬಾರಿಯ ಅಧಿವೇಶನದ ಕಲಾಪಕ್ಕೆ ಯಾರು ಸರಿಯಾದ ಸಮಯದಲ್ಲಿ ಹಾಜರಾಗುತ್ತಾರೆ ಅವರನ್ನು ಪ್ರೋತ್ಸಾಹಿಸಲು ಸದಸ್ಯರಿಗೆ ಟೀ ಕಪ್ ಸಾಸರ್ ಗಿಫ್ಟ್ ನೀಡಲು ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಅವರು ಸೋಮವಾರ ಅಧಿವೇಶನ ಆರಂಭವಾಗುವ ಮುನ್ನವೇ ನಿರ್ಧರಿಸಿದ್ದಾರೆ. ಸುವರ್ಣಸೌಧದಲ್ಲಿ ಅಧಿವೇಶನದ ಪೂರ್ವಸಿದ್ಧತೆ ಪರಿಶೀಲಿಸಿ ಬಳಿಕ ಸಭಾಪತಿ ಬಸವರಾಜ ಹೊರಟ್ಟಿ ಜೊತೆ ಜಂಟಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ್ದ ಅವರು ಈ ಬಾರಿ ಕೋರಂಗೆ ಮುನ್ನ ಕಲಾಪಕ್ಕೆ ಬರುವ ಸದಸ್ಯರನ್ನು ಗುರುತಿಸುವ ಕೆಲಸ ಮಾಡಲಾಗುತ್ತದೆ. ಸಮಯಕ್ಕೆ ಮುನ್ನ ಕಲಾಪಕ್ಕೆ ಆಗಮಿಸುವ ಸದಸ್ಯರಿಗೆ ಈ ಬಾರಿ ಟೀ ಕಪ್ ನೀಡಲಾಗುತ್ತದೆ. ಸದಸ್ಯ ಎಷ್ಟು ಸಾರಿ ಬೇಗ ಕಲಾಪಕ್ಕೆ ಬರುತ್ತಾರೋ ಅಷ್ಟು ಸಾರಿ ಟೀ ಕಪ್ ಸಾಸರ್ ನೀಡಲಾಗುತ್ತದೆ. ಈ ಟೀ ಕಪ್ ಸಾಸರ್ ರಾಜ್ಯ ಹಾಗೂ ರಾಷ್ಟ್ರೀಯ ಲಾಂಛನ ಹೊಂದಿರಲಿದೆ ಎಂದು ತಿಳಿಸಿದ್ದರು.

ಇದನ್ನೂ ಓದಿ: ಬೆಳಗಾವಿ ಅಧಿವೇಶನ: ಸಕಾಲಕ್ಕೆ ಕಲಾಪಕ್ಕೆ ಬರುವ ಸದಸ್ಯರನ್ನು ಪ್ರೋತ್ಸಾಹಿಸಲು ಟೀ ಕಪ್ ಸಾಸರ್ ಗಿಫ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.