ಕುಷ್ಟಗಿ ( ಕೊಪ್ಪಳ): ಶ್ರೀ ರಾಘವೇಂದ್ರ ಸ್ವಾಮೀಜಿಗಳ 349ನೇ ಆರಾಧನಾ ಮಹೋತ್ಸವ ನಿಮಿತ್ತ ಪಟ್ಟಣದ ಶ್ರೀ ರಾಘವೇಂದ್ರ ಸ್ವಾಮೀಜಿಗಳ ಮಠದಲ್ಲಿ ಮಧ್ಯಾರಾಧನೆ ನಡೆಯಿತು.
ಬೆಳಗ್ಗೆ ಶ್ರೀ ಮಠದಲ್ಲಿ ರಾಯರ ವೃಂದಾವನಗಳಿಗೆ ನಿರ್ಮಾಲ್ಯ ಸೇವೆ, ನಿರ್ಮಾಲ್ಯ ವಿಸರ್ಜನೆ, ಅಭಿಷೇಕ, ಪಂಚಾಮೃತಾಭಿಷೇಕ, ಅಲಂಕಾರ ಪೂಜೆ, ತುಳಸಿ ಅರ್ಚನೆ, ಹಸ್ತೋಧಕ ನಡೆದವು.
ಕೊರೊನಾ ಹಿನ್ನೆಲೆಯಲ್ಲಿ ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳು ಸಾಂಕೇತಿಕವಾಗಿ ನಡೆದವು.